ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದಿಂದ ಪತ್ರಿಕಾ ದಿನಾಚರಣೆ-ಸನ್ಮಾನ ಹಾಗೂ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Advt_Headding_Middle
Advt_Headding_Middle


ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ, ಸನ್ಮಾನ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಸಮಾರಂಭವು ಸುಳ್ಯದ ಪರಿವಾರಕಾನದ ಉಡುಪಿ ಗ್ರ್ಯಾಂಡ್ ಪರಿವಾರ್ ಸಭಾಂಗಣದಲ್ಲಿ ಜು.28ರಂದು ಜರುಗಿತು.


ಕಾರ್ಯಕ್ರಮದಲ್ಲಿ ಮಂಗಳೂರಿನ ಹಿರಿಯ ಪತ್ರಕರ್ತ ರಿಚರ್ಡ್ ಲಸ್ರಾದೋ, ಸುದ್ದಿ ಬಿಡುಗಡೆ ಪತ್ರಿಕೆಯ ಹಿರಿಯ ಪತ್ರಿಕಾ ಪ್ರತಿನಿಧಿ ಸಂಕಪ್ಪ ಸಾಲ್ಯಾನ್ ಅಲೆಕ್ಕಾಡಿ, ಹಿರಿಯ ಪತ್ರಿಕಾ ವಿತರಕರಾದ ತೇರಪ್ಪ ಮಣಿಯಾಣಿ ಪೆರುವಾಜೆ ಅವರನ್ನು ತಹಶಿಲ್ದಾರ್ ಅನಂತ ಶಂಕರ ಅವರು ಸನ್ಮಾನಿಸಿದರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಬಂಟ್ವಾಳ್ ಅವರು ಸನ್ಮಾನಿತರ ಪರಿಚಯ ಮಾಡಿ ಅಭಿನಂದನಾ ಭಾಷಣ ಮಾಡಿದರು. ಸನ್ಮಾನಿತರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.


ಪತ್ರಿಕಾ ದಿನಾಚರಣೆಯ ಹಿನ್ನೆಲೆಯಲ್ಲಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಚಿತ್ರಕಲೆ, ಪ್ರೌಢಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆಯನ್ನು, ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಚಿತ್ರಕಲೆಯಲ್ಲಿ ವಿಜೇತರಾದ ಆಯಿಷತ್ ಜುಮಾನ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಚಿತ್ರಕಲೆಯಲ್ಲಿ ವಿಜೇತರಾದ ಸಂದೇಶ್ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ನಡೆಸಿದ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ಚರಿಷ್ಮಾ ಕಡಪಳ ಅವರಿಗೆ ಬಹುಮಾನ ವಿತರಿಸಲಾಯಿತು. ಮುಖ್ಯ ಅತಿಥಿಯಾಗಿದ್ದ ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಜೆ.ಕೆ.ರೈ ಸುಳ್ಯ ಶುಭಹಾರೈಸಿದರು.
ಅಧ್ಯಕ್ಷ ಶರೀಫ್ ಜಟ್ಟಿಪಳ್ಳ ಮಾತನಾಡಿ ಕಾರ್ಯಕ್ರಮಕ್ಕೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದರು. ತಾಲೂಕು ಘಟಕದ ಕೋಶಾಧಿಕಾರಿ, ಜ್ಞಾನದೀಪ ವಿದ್ಯಾಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ವಂದಿಸಿದರು. ಜಿಲ್ಲಾ ಘಟಕದ ಸದಸ್ಯ ರಮೇಶ್ ನೀರಬಿದಿರೆ ಹಾಗೂ ತಾಲೂಕು ಘಟಕದ ಸದಸ್ಯೆ ಶ್ರೀಮತಿ ಪೂಜಾಶ್ರೀ ಪೈಚಾರು ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.