ಜು. 30 ರಂದು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಸನ್ಮಾನ ಕಾರ್ಯಕ್ರಮ

Advt_Headding_Middle
Advt_Headding_Middle

 

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ, ಸನ್ಮಾನ ಹಾಗೂ ಉಪನ್ಯಾಸ ಜು.30 ರಂದು ಪೂ 10 ಗಂಟೆಗೆ ತಾಲೂಕು ಪಂಚಾಯತ್ ಸಭಾಂಗಣ ದಲ್ಲಿ ನಡೆಯಲಿದೆ.
ತಾ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್ .ಭವಾನಿಶಂಕರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ ಅಧ್ಯಕ್ಷತೆ ವಹಿಸಲಿದ್ದಾರೆ. ಶಿವರಾಮ ಕಾರಂತ ಬಾಲವನ ಪುತ್ತೂರು ಇದರ ಆಡಳಿತಾಧಿಕಾರಿ ಡಾ । ಸುಂದರ್‌ ಕೇನಾಜೆ ಉಪನ್ಯಾಸ ನೀಡಲಿದ್ದಾರೆ. ಪತ್ರಿಕಾ ಕ್ಷೇತ್ರದ ಸೇವೆಗಾಗಿ ಶಂಕರ ಪೆರಾಜೆ ಇವರನ್ನು ಸನ್ಮಾನ ನಡೆಯಲಿದೆ. ಪೋಲೀಸ್ ಉಪನಿರೀಕ್ಷಕ ಹರೀಶ್ ಕುಮಾರ್ ಎಂ.ಆರ್. ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಜಿಲ್ಲಾ ಸಮಿತಿ ಸದಸ್ಯರಾದ ಗಂಗಾಧರ ಕಲ್ಲಪಳ್ಳಿ , ಲೋಕೇಶ್ ಪೆರ್ಲಂಪಾಡಿ ಉಪಸ್ಥಿತರಿರುವರು ಎಂದು ಸಂಘದ ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.