ಮರ್ಕಂಜ ಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

Advt_Headding_Middle
Advt_Headding_Middle

 

ಕಾರ್ಯಕರ್ತರೊಂದಿಗೆ ಸಮಾಲೋಚನೆ

ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷ ನಳೀನ್ ಕುಮಾರ್ ಕಟೀಲು ಮರ್ಕಂಜದ ಅವರ ಸಂಬಂಧಿಕರಾದ ಪನಿವಾರ ಸದಾಶಿವ ಅಡ್ಯಂತಾಯರವರ ನಿಧನದ ಹಿನ್ನೆಲೆಯಲ್ಲಿ ಮನೆಗೆ‌ ಭೇಟಿ ನೀಡಿದ ಬಳಿಕ ಮರ್ಕಂಜದ ಕಾರ್ಯಕರ್ತರ ಜೊತೆ ಗ್ರಾಮದ‌ ಅಭಿವೃದ್ಧಿಯ ಬಗ್ಗೆ ಮಾತನಾಡಿದರು.

ಈ ಸಂದರ್ಭದಲ್ಲಿ ಎಲಿಮಲೆ ಅರಂತೋಡು ರಸ್ತೆಯ ಬಗ್ಗೆ ತಮ್ಮಪ್ಪ ಗೌಡ ಪೂಂಬಾಡಿಯವರು ಪ್ರಸ್ತಾಪಿಸಿದರು. ಅದಷ್ಟೂ ಬೇಗ ಟೆಂಡರು ಪ್ರಕ್ರಿಯೆ ಮುಗಿಸಿ, ಕಾಮಗಾರಿ ಆರಂಭ ಮಾಡುವುದಾಗಿ ಹೇಳಿದರು. ನೆಟ್ ವರ್ಕ್ ಸಮಸ್ಯೆ ಬಗ್ಗೆ ರೇಣುಕಾ ಪ್ರಸಾದ್ ಬಲ್ಕಾಡಿಯವರು ಪ್ರಶ್ನಿಸಿದರು. ಈ ಬಗ್ಗೆ ಆ.1ರಂದು ಮಂಗಳೂರಿನಲ್ಲಿ ನಡೆಯುವ ಮೀಟಿಂಗ್ ನಲ್ಲಿ ಈ ಬಗ್ಗೆ ಸಮರ್ಪಕವಾದ ನಿಲುವುಗಳನ್ನು ತೆಗೆದುಕೊಂಡು ಮುಂದಿನ ದಿನಗಳಲ್ಲಿ ಪ್ರತಿಯೊಂದು ಗ್ರಾಮದಲ್ಲಿ ನೆಟ್ ವರ್ಕ್ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ಸುಳ್ಯ ಮಂಡಲ ಸಮಿತಿಯ ಅಧ್ಯಕ್ಷ ಹರೀಶ್ ಕಂಜಿಪಿಲಿ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಗ್ರಾಮದ
ಬಿಜೆಪಿ ಕಾರ್ಯಕರ್ತರು ಹಾಗೂ ಪಕ್ಷದ ಮುಖಂಡರಾದ ಎ.ವಿ.ತೀರ್ಥರಾಮ ಮತ್ತಿತರರು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.