ಸುಳ್ಯ ನಗರದಲ್ಲಿ ಆಂಟಿಜನ್ ರ್‍ಯಾಪಿಡ್ ಪರೀಕ್ಷೆ

Advt_Headding_Middle
Advt_Headding_Middle

ಕೋವಿಡ್ -19 ಆಂಟಿಜನ್ ರ್‍ಯಾಪಿಡ್ ಟೆಸ್ಟ್ ಸುಳ್ಯ ರೋಟರಿ ಶಾಲೆಯಲ್ಲಿ ವರ್ತಕರ ಸಂಘ ಸುಳ್ಯ, ರೋಟರಿ ಮತ್ತು ಲಯನ್ಸ್ ಕ್ಲಬ್ ಸುಳ್ಯ, ತಾಲೂಕು ಆಡಳಿತ, ನಗರ ಪಂಚಾಯತ್, ಆರೋಗ್ಯ ಇಲಾಖೆ ಇವುಗಳ ಜಂಟಿ ಆಶ್ರಯದಲ್ಲಿ ಆ.05ರಂದು ನಡೆಯಿತು.
ಸುಳ್ಯ ತಹಶೀಲ್ದಾರ್ ಅನಂತ ಶಂಕರ್ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ.ಸುಬ್ರಹ್ಮಣ್ಯ, ವರ್ತಕರ ಸಂಘದ ಅಧ್ಯಕ್ಷ ಪಿ.ಬಿ ಸುಧಾಕರ ರೈ, ಲಯನ್ಸ್ ಕ್ಲಬ್ ಅಧ್ಯಕ್ಷ ರಾಮಚಂದ್ರ ಗೌಡ ಪೆಲ್ತಡ್ಕ, ನಗರ ಪಂಚಾಯತ್ ಇಂಜಿನಿಯರ್ ಶಿವಕುಮಾರ್, ನಗರ ಪಂಚಾಯತ್ ಸದಸ್ಯ ಎಂ.ವೆಂಕಪ್ಪ ಗೌಡ, ಸುಳ್ಯ ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸ್ಥಳೀಯ ವಾರ್ಡ್ ಸದಸ್ಯ ಎಂ. ವೆಂಕಪ್ಪ ಗೌಡ ಕೋವಿಡ್ -19 ಆಂಟಿಜನ್ ರ್‍ಯಾಪಿಡ್ ಪರೀಕ್ಷೆ ಮಾಡಿಸಿಕೊಂಡರು. ಜೊತೆಗೆ ಹಲವಾರು ಮಂದಿ ಈ ಪರೀಕ್ಷೆಯ ಪ್ರಯೋಜನವನ್ನು ಪಡೆದುಕೊಂಡರು. ಸುಳ್ಯ ರೋಟರಿ ಸಿಟಿ ಅಧ್ಯಕ್ಷ ಗುರು ವಿಕ್ರಮ್ ಪ್ರಸಾದ್ ಸ್ವಾಗತಿಸಿ ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ ಸುಧಾಕರ ರೈ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.