ಅಯೋಧ್ಯೆಯಲ್ಲಿನ ಶ್ರೀ ರಾಮಮಂದಿರದ ಕೆಲಸ ಕಾರ್ಯಗಳು ನಿರ್ವಿಘ್ನವಾಗಿ ನೆರವೇರುವಂತೆ ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ಪೂರ್ವಾಹ್ನ 11.30 ರಿಂದ 12.30 ಸಮಯದಲ್ಲಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀ ದೇವರಿಗೆ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಮಾಡಲಾಯಿತು.
ವಿಶ್ವ ಹಿಂದೂ ಪರಿಷತ್ ನ ಹಿರಿಯ ಮುಖಂಡ ಡಾ.ಬಾಲಸುಬ್ರಹ್ಮಣ್ಯ ಭಟ್ ಪಾಲೆಪ್ಪಾಡಿ ಅವರು ರಾಮಮಂದಿರದ 500 ವರ್ಷಗಳ ಹೋರಾಟದ ಬಗ್ಗೆ ಮಾತನಾಡಿ, ರಾಮಮಂದಿರದ ಹಿರಿಯ ಹೋರಾಟಗಾರ ವಾಮನ ಗೌಡ ಕೋಂದ್ರಮಜಲು ಇವರನ್ನು ಶಾಲು ಹೊದಿಸಿ ಗೌರವಿಸಿದರು. ಬಿ ಜೆ ಪಿ ಮುಖಂಡ ಚಂದ್ರ ಕೋಲ್ಚಾರು ಕಾರ್ಯಕ್ರಮದ ನೇತ್ರತ್ವ ವಹಿಸಿದರು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪಂಚಾಕ್ಷರಿ ಶಾಖೆ ದೇರಾಜೆ, ಐವರ್ನಾಡು ಇದರ ಎಲ್ಲಾ ಪದಾಧಿಕಾರಿಗಳು, ಭಕ್ತಾದಿಗಳು ಈ ಸಮಯದಲ್ಲಿ ಉಪಸ್ಥಿತರಿದ್ದರು.