Breaking News

ಕೆವಿಜಿ ಪಾಲಿಟೆಕ್ನಿಕ್‌ನಲ್ಲಿ ಶೀನಪ್ಪ ಗೌಡರಿಗೆ ಬೀಳ್ಕೊಡುಗೆ

Advt_Headding_Middle
Advt_Headding_Middle

ಸುಳ್ಯದ ಕುರುಂಜಿ ವೆಂಕಟ್ರಮಣಗೌಡ ಪಾಲಿಟೆಕ್ನಿಕ್‌ನ ಅಟೊ ಮೊಬೈಲ್ ಇಂಜಿನಿಯರಿಂಗ್ ವಿಭಾಗದಲ್ಲಿಆಯ್ಕೆ ಶ್ರೇಣಿ ಉಪನ್ಯಾಸಕರಾಗಿ ಜುಲೈ ತಿಂಗಳಲ್ಲಿ ವಯೋ ನಿವೃತ್ತಿ ಹೊಂದಿದ ಶೀನಪ್ಪ ಗೌಡರಿಗೆ ಬೀಳ್ಕೊಡುಗೆ ಸಮಾರಂಭವು ಪಾಲಿಟೆಕ್ನಿಕ್‌ನ ಪ್ರಾಂಶುಪಾಲರ ಕೊಠಡಿಯಲ್ಲಿ ನಡೆಯಿತು.


ಅಕಾಡೆಮಿಆಫ್ ಲಿಬರಲ್‌ಎಜುಕೇಶನ್‌ನ ಪ್ರಧಾನ ಕಾರ್ಯದರ್ಶಿ ಡಾ.ರೇಣುಕಾ ಪ್ರಸಾದ್ ಕೆ.ವಿ ಸಮಾರಂಭದ ಅಧ್ಯಕ್ಷತೆ ವಹಿಸಿ ನಿವೃತ್ತರನ್ನು ಸನ್ಮಾನಿಸಿದರು. ನೆಹರೂ ಮೆಮೋರಿಯಲ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೆ.ವಿ. ದಾಮೋದರ ಗೌಡ ಅಭಿನಂದನಾ ಭಾಷಣ ಮಾಡಿದರು. ಮುಖ್ಯ ಅತಿಥಿಗಳಾಗಿ ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷಎನ್.ಎ.ರಾಮಚಂದ್ರ, ಕೆ.ವಿ.ಜಿಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಡಾ. ಉಜ್ವಲ್‌ಯು.ಜೆ ಹಾಗೂ ಕೆ.ವಿ.ಜಿ ಡೆಂಟಲ್ ಕಾಲೇಜಿನ ಆಡಳಿತಾಧಿಕಾರಿ ಮಾಧವ ಬಿ.ಟಿ ಉಪಸ್ಥಿತರಿದ್ದು, ಶುಭ ಹಾರೈಸಿದರು.
ಸಿಬ್ಬಂದಿಗಳ ಪರವಾಗಿ ಅಟೊಮೋಬೈಲ್ ವಿಭಾಗದ ಮುಖ್ಯಸ್ಥ ಎಂ.ಎನ್. ಚಂದ್ರಶೇಖರ ಅಭಿನಂದನೆ ಸಲ್ಲಿಸಿದರು. ಬಾಲಕೃಷ್ಣ ಮರಸಂಕ ಸನ್ಮಾನ ಪತ್ರ ವಾಚಿಸಿದರು. ಸಿವಿಲ್ ವಿಭಾಗದ ಶಿಕ್ಷಕ ನಾರಾಯಣ ತೋರಣಗಂಡಿಯವರು ಪ್ರಾರ್ಥಿಸಿ, ಪ್ರಾಂಶುಪಾಲ ಜಯಪ್ರಕಾಶ್ ಕೆ ಸ್ವಾಗತಿಸಿ, ಪ್ರಸ್ತಾವನೆಗೈದರು. ಸಿವಿಲ್ ವಿಭಾಗದ ಉಪನ್ಯಾಸಕ ಸುನಿಲ್ ಕುಮಾರ್‌ಎನ್.ಪಿ ವಂದಿಸಿದರು. ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.