ಕಾನೂನು ಪದವೀದರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಅರ್ಜಿ ಆಹ್ವಾನ

Advt_Headding_Middle
Advt_Headding_Middle

೨೦೨೦-೨೧ನೇ ಸಾಲಿನಲ್ಲಿ ದ.ಕ. ಜಿಲ್ಲೆಯಲ್ಲಿರುವ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಸರಕಾರಿ ಆದೇಶ ಮತ್ತು ಮಾರ್ಗಸೂಚಿಯಂತೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಯು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು ಹಾಗೂ ಜಾತಿ ಪ್ರಮಾಣ ಪತ್ರ ಹೊಂದಿರಬೇಕು. ಅಭ್ಯರ್ಥಿಯು ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ ಶಿಕ್ಷಣ ಸಂಸ್ಥೆಗಳಿಂದ ಮೂರು ವರ್ಷ ಅಥವಾ ಐದು ವರ್ಷಗಳ ಕಾನೂನು ಪದವಿ ಶಿಕ್ಷಣವನ್ನು ಪೂರೈಸಿರಬೇಕು. ಈ ಬಗ್ಗೆ ಅಂಕಪಟ್ಟಿ ಮತ್ತು ಪದವಿ ಪ್ರಮಾಣ ಪತ್ರಗಳನ್ನು ಹೊಂದಿರಬೇಕು. ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಬೆಂಗಳೂರು ಇದರ ಸದಸ್ಯರಾಗಿರಬೇಕು ಹಾಗೂ ಸದಸ್ಯತ್ವ ನೋಂದಣಿ ಪತ್ರ ಹೊಂದಿರಬೇಕು. ಕುಟುಂಬದ ವಾರ್ಷಿಕ ಆದಾಯ ಎರಡೂವರೆ ಲಕ್ಷ ಮೀರಿರಬಾರದು. ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದವರೆಗೆ ಅಭ್ಯರ್ಥಿಯ ಗರಿಷ್ಠ ವಯೋಮಿತಿಯು ನಲವತ್ತು ವರ್ಷ ಆಗಿರತಕ್ಕದ್ದು. ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಆ. ೧೦ ಆಗಿರುತ್ತದೆ. ಅಪೂರ್ಣ ಅರ್ಜಿ, ತಡವಾಗಿ ಬಂದ ಅರ್ಜಿ ಹಾಗೂ ನಿಬಂಧನೆಗಳನ್ನು ಪೂರೈಸಿದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅರ್ಹ ಅರ್ಜಿಗಳ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಪಾಸ್ ನಿಗದಿತ ಅರ್ಜಿ ನಮೂನೆಯೊಂದಿಗೆ ಅರ್ಜಿಯಲ್ಲಿ ಕೇಳಿರುವ ಎಲ್ಲ ಪ್ರಮಾಣ ಪತ್ರಗಳ ದೃಢೀಕರಣ ಪತ್ರಗಳನ್ನು ಲಗ್ತೀಕರಿಸಬೇಕು. (ಭಾವಚಿತ್ರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ) ದಕ್ಷಿಣ ಕನ್ನಡ ಜಿಲ್ಲೆಯವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ ಎಂದು ಸುಳ್ಯ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.