ಕೆವಿಜಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಉಸ್ತುವಾರಿ ಸಚಿವ, ಜಿಲ್ಲಾಧಿಕಾರಿ ಭೇಟಿ

Advt_Headding_Middle
Advt_Headding_Middle

 ಕೋವಿಡ್ ವಿಭಾಗ ಕಾರ್ಯನಿರ್ವಹಣೆಯ ಪರಿಶೀಲನೆ

ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಇಂದು ಭೇಟಿ ನೀಡಿ ಆಸ್ಪತ್ರೆಯಲ್ಲಿರುವ ಕೋವಿಡ್ ವಿಭಾಗ ಕಾರ್ಯನಿರ್ವಹಣೆ ಕುರಿತಂತೆ ಮಾಹಿತಿ ಪಡೆದರು.
ಆಸ್ಪತ್ರೆಗೆ ಆಗಮಿಸಿದ ಉಸ್ತುವಾರಿ ಸಚಿವರನ್ನು ಆಸ್ಪತ್ರೆಯ ಆಡಳಿತ ನಿರ್ದೇಶಕ ಹಾಗೂ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಅಧ್ಯಕ್ಷ ಡಾ.ಕೆ.ವಿ. ಚಿದಾನಂದ ಸ್ವಾಗತಿಸಿದರು. ಬಳಿಕ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಕೋವಿಡ್ ವಿಭಾಗದ ವಿವಿಧ ಕೇಂದ್ರಗಳಿಗೆ ತೆರಳಿ ವೀಕ್ಷಣೆ ನಡೆಸಿದರು. ನಂತರ ಮೆಡಿಕಲ್ ಕಾಲೇಜು ಆಸ್ಪತ್ರೆಯ ಕಛೇರಿಗೆ ಬಂದು ಪ್ರೋಜೆಕ್ಟರ್ ಮೂಲಕ ಕೋವಿಡ್ ವಿಭಾಗದ ಕಾರ್ಯನಿರ್ವಹಣೆಯ ಕುರಿತಂತೆ ಮಾಹಿತಿ ಪಡೆದರು.

ಆಸ್ಪತ್ರೆಯ ಉಸ್ತುವಾರಿ ವೈದ್ಯಾಧಿಕಾರಿ ಡಾ.ಸಿ. ರಾಮಚಂದ್ರ ಭಟ್ ಸಚಿವರು ಹಾಗೂ ಜಿಲ್ಲಾಧಿಕಾರಿಯವರಿಗೆ ಮಾಹಿತಿ ನೀಡಿದರು. ಈ ಆಸ್ಪತ್ರೆಯ ಕೋವಿಡ್ ವಿಭಾಗದಲ್ಲಿ ಇದುವರೆಗೆ ೩೯ ರೋಗಿಗಳು ಚಿಕಿತ್ಸೆ ಪಡೆದಿದ್ದಾರೆ. ಈಗ ೧೪ ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಉಳಿದವರು ಗುಣಮುಖರಾಗಿ ತೆರಳಿದ್ದಾರೆ ಎಂದು ಮಾಹಿತಿ ನೀಡಿದ ಅವರು ಮಾರ್ಚ್‌ನಿಂದ ಇದುವರೆಗೆ ಐಸೋಲೇಷನ್ ಹಾಗೂ ಕೋವಿಡ್ ವಿಭಾಗ ಕಾರ್ಯನಿರ್ವಹಿಸುವ ರೀತಿಯನ್ನು ಮುಂದಿಟ್ಟರು.

ಡಾ. ಕೆ.ವಿ. ಚಿದಾನಂದ ಅವರು ಕೂಡಾ ಪೂರಕ ಮಾಹಿತಿ ಒದಗಿಸಿದರು. ಜಿಲ್ಲಾಡಳಿತದ ಸೂಚನೆ ಮೇರೆಗೆ ನಾವು ಎಲ್ಲಾ ಸೇವೆಯನ್ನು ನೀಡುತ್ತಿದ್ದೇವೆ. ಅಧಿಕಾರಿಗಳೂ ಕೂಡ ನಮಗೆ ಸಹಕಾರ ನೀಡಿದ್ದಾರೆ ಎಂದು ಡಾ. ಚಿದಾನಂದರು ಹೇಳಿದರು.
ಉಸ್ತುವಾರಿ ಸಚಿವರು ಆಯುಷ್ಮಾನ್ ಯೋಜನೆ ಮತ್ತಿತರ ಸಂಗತಿಗಳ ಕುರಿತು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಕೆವಿಜಿ ಆಯುರ್ವೇದಿಕ್ ಕಾಲೇಜಿನ ಕೆವಿಜಿ ಆಯುರ್ವೇದ ಫಾರ್ಮ ಮತ್ತು ರೀಸರ್ಚ್ ಸೆಂಟರ್ ಉತ್ಪನ್ನವಾದ ಆಯುಷ್ ಕ್ವಾತಾವನ್ನು ಕಾರ್ಯನಿರ್ವಹಣಾಧಿಕಾರಿ ಡಾ. ಪುರುಷೋತ್ತಮ ರವರು ಸಚಿವರಿಗೆ ಹಾಗೂ ಅಧಿಕಾರಿಗಳಿಗೆ ನೀಡಿದರು.
ಶಾಸಕ ಎಸ್. ಅಂಗಾರ, ಸಹಾಯಕ ಕಮಿಷನರ್ ಡಾ. ಯತೀಶ್ ಉಳ್ಳಾಲ್, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಜಿಲ್ಲಾ ಪಂಚಾಯತ್ ಸದಸ್ಯರಾದ ಹರೀಶ್ ಕಂಜಿಪಿಲಿ, ಪುಷ್ಪಾವತಿ ಬಾಳಿಲ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಾಮಚಂದ್ರ ಬಾಯರಿ, ತಾಲೂಕು ಆರೋಗ್ಯ ಅಧಿಕಾರಿ ಡಾ. ಸುಬ್ರಹ್ಮಣ್ಯ, ತಹಶಿಲ್ದಾರ್ ಅನಂತ ಶಂಕರ್, ವೆಂಕಟ್ ವಳಲಂಬೆ, ಚಂದ್ರ ಕೋಲ್ಚಾರ್, ಡಾ. ಗೀತಾ ದೊಪ್ಪ, ನೋಡೆಲ್ ವೈದ್ಯಾಧಿಕಾರಿ ಡಾ.ಸಚಿನ್, ಮೆಡಿಕಲ್ ಕಾಲೇಜು ಸಾರ್ವಜನಿಕ ಸಂಪರ್ಕಾಧಿಕಾರಿ ರಜತ್ ಅಡ್ಕಾರ್ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.