Breaking News

ಕೋವಿಡ್-19: ಪರಿಷ್ಕತ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರಕಾರ

Advt_Headding_Middle
Advt_Headding_Middle

 

ಸಾರ್ವಜನಿಕ ಗಣೇಶೋತ್ಸವಕ್ಕೆ ಬಿಗು ನಿರ್ಬಂಧಗಳೊಂದಿಗೆ ಅವಕಾಶ ನೀಡಿದ ಸರಕಾರ

ಕೊರೋನಾ ಹಿನ್ನಲೆಯಲ್ಲಿ ಸಾರ್ವಜನಿಕ ಗಣೇಶೋತ್ಸವಗಳಿಗೆ ನಿರ್ಬಂಧ ವಿಧಿಸಿದ್ದ ರಾಜ್ಯ ಸರಕಾರ ಇದೀಗ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದ್ದು ಅನೇಕ ನಿರ್ಬಂಧಗಳೊಂದಿಗೆ ಅವಕಾಶ ನೀಡಿದೆ.
ಕೇಂದ್ರೀಯ ಗೃಹ ಮಂತ್ರಾಲಯವು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ನಿರ್ದೇಶನದನ್ವಯ ಕೋವಿಡ್ – ೧೯ ಕಂಟೈನ್ಮೆಂಟ್ ವಲಯಗಳಲ್ಲಿ ಲಾಕ್ ಡೌನ್ ಅವಧಿಯನ್ನು ವಿಸ್ತರಿಸಲು ಹಾಗೂ ಕಂಟೈನ್ಮೆಂಟ್ ವಲಯಗಳ ಹೊರಗಿನ ಪ್ರದೇಶಗಳಲ್ಲಿ ಹೆಚ್ಚಿನ ಚಟುವಟಿಕೆಗಳನ್ನು ಪುನಃ ಆರಂಭಿಸಲು ತೆರವು ಮಾರ್ಗಸೂಚಿಗಳನ್ನು ಹೊರಡಿಸಿದೆ. ಇವು ಆ. ೩೧ ರವರೆಗೆ ಜಾರಿಯಲ್ಲಿರುತ್ತದೆ.
ಕೇಂದ್ರ ಸರಕಾರವು ಹೊರಡಿಸಿದ ತೆರವು 3ರ ಅವಧಿಯಲ್ಲಿನ ಅನುಮತಿಸಲಾದ ಕಾರ್ಯಚಟುವಟಿಕೆಗಳಲ್ಲಿ ಸಾಮಾಜಿಕ, ರಾಜಕೀಯ, ಕ್ರೀಡೆ, ಮನೋರಂಜನೆ, ಶೈಕ್ಷಣಿಕ, ಧಾರ್ಮಿಕ ಕಾರ್ಯಗಳು ಮತ್ತು ಇತರೆ ಬೃಹತ್ ಸಭೆಗಳಿಗೆ ಅನುಮತಿ ನೀಡಿರುವುದಿಲ್ಲ. ಅದರಂತೆ ರಾಜ್ಯ ಸರಕಾರವು ಜು.3೦ ರಂದು ಹೊರಡಿಸಿದ ಮಾರ್ಗಸೂಚಿಯಲ್ಲಿ ಇವುಗಳಿಗೆ ಅನುಮತಿಯನ್ನು ನೀಡಿಲ್ಲ.
ಕೋವಿಡ್ -೧೯ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ರಾಜ್ಯ ಸರ್ಕಾರವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ಆ.22 ರಂದು ಗಣೇಶ್ ಚತುರ್ಥಿ ಹಬ್ಬ ಆಚರಣೆಯಲ್ಲಿರುವುದರಿಂದ ಕೊರೋನಾ ಹಿನ್ನಲೆಯಲ್ಲಿ ಹಬ್ಬವನ್ನು ಸರಳ ರೀತಿಯಲ್ಲಿ ಆಚರಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ೨೦೦೫ ಯಡಿಯಲ್ಲಿ ಗಣೇಶೋತ್ಸವವನ್ನು ಆಚರಿಸುವ ಸಂಬಂಧವಾಗಿ ಆದೇಶದ ಅನುಬಂಧದಲ್ಲಿರುವಂತೆ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಈ ಮಾರ್ಗಸೂಚಿಗಳು ಇಂದಿನಿಂದ ಜಾರಿಯಲ್ಲಿರುತ್ತದೆ. ಈ ಹಿಂದೆಯ ಮಾರ್ಗಸೂಚಿಗಳನ್ನು ಸರಕಾರ ಪರಿಷ್ಕೃತಗೊಳಿಸಿದ್ದು ಸಾರ್ವಜನಿಕವಾಗಿಯೂ ವಿಗ್ರಹ ಪ್ರತಿಷ್ಠಾಪನೆಗೆ ಅವಕಾಶ ನೀಡಿದೆ. ಆದರೆ ಮೆರವಣಿಗೆಗೆ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ. ವಿಗ್ರಹ ಪ್ರತಿಷ್ಠೆಯಲ್ಲಿ ಅಂತರ ಕಾಯ್ದುಕೊಳ್ಳಬೇಕು. ವಿಗ್ರಹದ ಬಳಿ ಒಂದು ಬಾರಿ 2೦ ಕ್ಕಿಂತ ಜಾಸ್ತಿ ಜನ ಸೇರಬಾರದು ಮೊದಲಾದ ನಿಯಮ ರೂಪಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.