ಸುಳ್ಯದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಉಚಿತ ಆಯುಷ್ಮಾನ್ ಕಾರ್ಡ್ ವಿತರಣೆ

Advt_Headding_Middle
Advt_Headding_Middle

 

ಯುವಕರಿಂದ ಜನಪರ ಕಾರ್ಯ : ಶಾಸಕ ಅಂಗಾರ

“ಮೋದಿ ಸರಕಾರ ಜಾರಿಗೊಳಿಸಿರುವ ಆಯುಷ್ಮಾನ್ ನಂತಹ ಮಹತ್ವದ ಯೊಜನೆಯನ್ನು ಯುವಕರ ತಂಡ ಜನರಿಗೆ ತಲುಪಿಸುವ ಮೂಲಕ ಉತ್ತಮ ಕಾರ್ಯ ನಡೆಸುತ್ತಿದೆ. ಈ ರೀತಿಯ ಜನಪರ ಕಾರ್ಯ ನಿರಂತರ ನಡೆಸುವುದರ ಜತೆಗೆ ಸಾರ್ವಜನಿಕರು ಕೂಡಾ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಶಾಸಕ ಎಸ್.ಅಂಗಾರ ಹೇಳಿದರು.

ಸುಳ್ಯ ಮಂಡಲ ಯುವ ಮೋರ್ಚಾ ವತಿಯಿಂದ ಸುಳ್ಯದ ಎ.ಪಿ.ಎಂ.ಸಿ.ಯಲ್ಲಿ ಆಯೋಜಿಸಲಾಗಿರುವ ಉಚಿತ ಆಯುಷ್ಮಾನ್ ಯೋಜನೆ ಕಾರ್ಡ್ ವಿತರಣೆ ಗೆ ಚಾಲನೆ ನೀಡಿ ಅವರು ಮಾತನಾಡಿದರು.

ಯುವ ಮೋರ್ಚಾ ಅಧ್ಯಕ್ಷ ಶ್ರೀಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮಂಡಲ ಸಮಿತಿ ಮಾಜಿ ಅಧ್ಯಕ್ಷ ವೆಂಕಟ್ ವಳಲಂಬೆ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಸುಳ್ಯ ಎ.ಪಿ.ಎಂ.ಸಿ.‌ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಗುರುದತ್ ಜಿ ನಾಯಕ್ ಇದ್ದರು.

ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ ಕಾರ್ಯಕ್ರಮ ನಿರೂಪಿಸಿದರು. ಸುಪ್ರಿತ್ ಮೋಂಟಡ್ಕ ಮೊದಲಾದವರು ಸಹಕರಿಸಿದರು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.