ಕೆ.ವಿ.ಜಿ. ದಂತ ಮಹಾವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ತರಗತಿಗಳ ಆರಂಭ

Advt_Headding_Middle
Advt_Headding_Middle


ಕೆ.ವಿ.ಜಿ. ದಂತ ಮಹಾವಿದ್ಯಾಲಯ ಮತ್ತುಆಸ್ಪತ್ರೆ, ಸುಳ್ಯದಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ತರಗತಿ ಆರಂಭದ ಕಾರ್ಯಕ್ರಮ ನಡೆಯಿತು. ಸ್ನಾತಕೋತ್ತರ ತರಗತಿಗಳ ಪ್ರಾರಂಭೋತ್ಸವದ ಜೊತೆಗೆ ವಿದ್ಯಾರ್ಥಿಗಳಿಗೆ ಮಾಹಿತಿ ಮತ್ತು ತರಬೇತಿ ಕಾರ್ಯಕ್ರಮವೂ ಜರುಗಿತು.


ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಅಕಾಡೆಮಿಆಫ್ ಲಿಬರಲ್‌ಎಜ್ಯುಕೇಶನ್‌ನ ಪ್ರಧಾನ ಕಾರ್ಯದರ್ಶಿಗಳಾದ ಡಾ.ರೇಣುಕಾಪ್ರಸಾದ್ ಕೆ.ವಿ. ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸಿ, ಅವರಿಗೆ ಶುಭ ಹಾರೈಸಿದರು.
ಕಾಲೇಜಿನ ಪ್ರಾಂಶುಪಾಲೆ ಡಾ.ಮೋಕ್ಷಾ ನಾಯಕ್‌ರವರು ಅತಿಥಿಗಳನ್ನು ಹಾಗೂ ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸಿ, ಅಭಿನಂದಿಸಿ, ಕಾಲೇಜಿನಲ್ಲಿನ ಶಿಸ್ತು ಮತ್ತು ಅಭ್ಯಾಸ ಕ್ರಮಗಳ ಬಗ್ಗೆ ವಿವರಿಸಿದರು.
ಕೆ.ವಿ.ಜಿದಂತ ಮಹಾವಿದ್ಯಾಲಯ ಸ್ನಾತಕೋತ್ತರ ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ| ಶರತ್‌ಕುಮಾರ್ ಶೆಟ್ಟಿ ಹಾಗೂ ಎಲ್ಲಾ ವಿಭಾಗ ಮುಖ್ಯಸ್ಥರುಗಳು ಮಾತನಾಡಿದರು. ಎಲ್ಲಾ ನೂತನ ೩೪ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹೂಗುಚ್ಛ ನೀಡುವುದರ ಮೂಲಕ ಸ್ವಾಗತಿಸಲಾಯಿತು. ಕೊನೆಯಲ್ಲಿ ಡಾ.ಮಹಾಬಲೇಶ್ವರ ಸಿ.ಹೆಚ್. ರವರು ವಂದನಾರ್ಪಣೆಗೈದರು. ಕಾರ್ಯಕ್ರಮದಲ್ಲಿ ಬೋಧಕ, ಬೋಧಕೇತರಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಡಾ.ಅನುಷಾ ಕೆ. ಹಾಗೂ ಡಾ. ಲಕ್ಷ್ಮಿ ಪಾಂಡೆ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.