ನಿವೃತ್ತ ಎಸ್.ಐ. ಸುಂದರ ಆಚಾರ್ಯ ಮರೋಳಿರವರಿಗೆ ಬೀಳ್ಕೊಡುಗೆ

Advt_Headding_Middle
Advt_Headding_Middle

 

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿ ಆ.೩೧ ರಂದು ನಿವೃತ್ತರಾದ ಮಂಗಳೂರು ಬಂದರು ಠಾಣೆಯ ಸಬ್ ಇನ್‌ಸ್ಪೆಕ್ಟರ್ ಸುಂದರ ಆಚಾರ್ಯ ಮರೋಳಿ ರವರಿಗೆ ಬೀಳ್ಕೊಡುಗೆ ಸಮಾರಂಭ ಮಂಗಳೂರಿನಲ್ಲಿ ನಡೆಯಿತು.

ಮಂಗಳೂರು ಕೇಂದ್ರ ಉಪವಿಭಾಗದ ಎಸಿಪಿ ಜಗದೀಶ್, ಮಂಗಳೂರು ಉತ್ತರ ಠಾಣೆಯ ಇನ್‌ಸ್ಪೆಕ್ಟರ್ ಗೋವಿಂದರಾಜ್, ಇನ್‌ಸ್ಪೆಕ್ಟರ್ ಸವಿತ್ರಾತೇಜ್, ಸಬ್‌ಇನ್‌ಸ್ಪೆಕ್ಟರ್‌ಗಳಾದ ಗುರುಕಾಂತಿ, ನಾಗರಾಜ್, ವಿಜಯ ರಾಜ್, ಪ್ರದೀಪ್ ಹಾಗೂ ಸಿಬಂದಿಗಳು ಉಪಸ್ಥಿತರಿದ್ದರು. ೩೯ ವರ್ಷ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಮರೋಳಿ ನಿವಾಸಿ ಸುಂದರ ಆಚಾರ್ಯರವರು ಸೇವಾವಧಿಯಲ್ಲಿ ಪುತ್ತೂರು, ಕದ್ರಿ, ಸುರತ್ಕಲ್, ಬರ್ಕೆ, ಮಂಗಳೂರು ಬಂದರು, ಕೊಣಾಜೆ, ಉಳ್ಳಾಲ ಪೊಲೀಸ್ ಠಾಣೆಗಳಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಇವರ ಉತ್ತಮ ಸೇವೆಯನ್ನು ಪರಿಗಣಿಸಿ ಕರ್ನಾಟಕ ಸರಕಾರ ೨೦೧೮ರಲ್ಲಿ ಮುಖ್ಯಮಂತ್ರಿ ಪದಕ ನೀಡಿ ಗೌರವಿಸಿತ್ತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.