ಹರೀಶ್ ಕುಮಾರ್ ವೈ ಪ್ರೌಢ ಶಾಲಾ ಶಿಕ್ಷಕರಾಗಿ ಪದೋನ್ನತಿ

Advt_Headding_Middle
Advt_Headding_Middle

 

ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ಮೇನಾಲದಲ್ಲಿ ಕಳೆದ ೧೭ ವರ್ಷಗಳಿಂದ ಇಂಗ್ಲೀಷ್ ಭಾಷಾ ಶಿಕ್ಷಕರಾಗಿ ಕರ್ತವ್ಯನಿರ್ವಹಿಸುತ್ತಿದ್ದ ಹರೀಶ್ ಕುಮಾರ್ ವೈಯವರು ಪುತ್ತೂರು ತಾಲೂಕಿ ಮಂಜುನಾಥ ನಗರ ಸರ್ಕಾರಿ ಪ್ರೌಢ ಶಾಲೆಗೆ ಇಂಗ್ಲೀಷ್ ಭಾಷಾ ಶಿಕ್ಷಕರಾಗಿ ಪದೋನ್ನತಿ ಪಡೆದಿದ್ದಾರೆ.

ಇವರು ಎಸ್.ಡಿ.ಎಂ.ಸಿ ಹಿರಿಯ ವಿದ್ಯಾರ್ಥಿ ಸಂಘ ಮತ್ತು ಊರ ವಿದ್ಯಾಭಿಮಾನಿಗಳ ಸಹಕಾರದೊಂದಿಗೆ ಮೇನಾಲ ಶಾಲೆಯ ಅಭಿವೃದ್ಧಿಗೆ ಶ್ರಮಿಸಿದ್ದರಲ್ಲದೆ ಶಾಲೆಯಲ್ಲಿ ಕ್ರೀಡೆ, ಸ್ಕೌಟ್ ತರಬೇತಿ ನೀಡಿದ್ದರು. ಇಂಗ್ಲೀಷ್ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸುವ ಮೂಲಕ ಊರ ಜನರ ಪ್ರೀತಿಗೆ ಪಾತ್ರರಾಗಿದ್ದರು. ಇವರು ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಪ್ರಸ್ತುತ ಬೆಳ್ಳಾರೆಯ ಕಾವಿನಮೂಲೆಯಲ್ಲಿರುವ ಸುರಕ್ಷಾ ಅಪಾರ್ಟ್ಮೆಂಟ್ ನಲ್ಲಿ ನೆಲೆಸಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.