ರೋಟರಿ ಕ್ಲಬ್ ಬೆಳ್ಳಾರೆ ಟೌನ್ ನಿಂದ ನೇಶನ್ ಬಿಲ್ಡರ್ ಪ್ರಶಸ್ತಿ ಪ್ರದಾನ

Advt_Headding_Middle
Advt_Headding_Middle

 

 

ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಅಂತಾರಾಷ್ಟ್ರೀಯ ಸಾಕ್ಷರತಾ ದಿನವನ್ನು ಆಚರಿಸಿ ಇಂದ್ರಾಜೆ ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಸುವರ್ಣಚಂದ್ರಿಕಾರವರಿಗೆ `ನೇಶನ್ ಬಿಲ್ಡರ್ ಪ್ರಶಸ್ತಿ 2020′ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಲಬ್ ಅಧ್ಯಕ್ಷರಾದ ರೊ| ಮೋನಪ್ಪ ತಂಬಿನಮಕ್ಕಿಯವರು ವಹಿಸಿದ್ದರು. ರೊ| ನವೀನ್ ಕುಮಾರ್ ರೈ ತಂಬಿನಮಕ್ಕಿಯವರು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ರೊ| ಕೇಶವ ಮೂರ್ತಿ ಸನ್ಮಾನಿತರನ್ನು ಪರಿಚಯಿಸಿದರು. ಎಸ್.ಡಿ.ಎಂ.ಸಿ. ಅಧ್ಯಕ್ಷೆ ಗಾಯತ್ರಿ ಕುರಿಯ, ಸಿ.ಎ. ಬ್ಯಾಂಕ್ ಅಧ್ಯಕ್ಷ ಶ್ರೀ ಕೂಸಪ್ಪ ಗೌಡ ಮುಗುಪ್ಪು, ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷ ಶ್ರೀ ಕೆ.ಪಿ. ಶೇಖರ್ ಶುಭ ಹಾರೈಸಿದರು. ರೊ| ವಿನಯಕುಮಾರ್ ಕಾರ್ಯಕ್ರಮವನ್ನು ನಿರ್ವಹಿಸಿ ರೊ| ಎ.ಕೆ. ಮಣಿಯಾಣಿ ಧನ್ಯವಾದ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಕ್ಲಬ್ ಸದಸ್ಯರಾದ ರೊ| ರವೀಂದ್ರ ಗೌಡ, ಎನ್.ಎಸ್. ವೆಂಕಪ್ಪ, ಪ್ರಮೋದ್ ಕೆ.ಕೆ., ಶಶಿಧರ್ ಬಿ.ಕೆ., ಎಸ್.ಡಿ.ಎಂ.ಸಿ. ಸದಸ್ಯರು, ಸ್ತ್ರೀಶಕ್ತಿ ಸಂಘದ ಸದಸ್ಯರು, ಶಾಲಾ ಅಭಿಮಾನಿಗಳು, ಪೋಷಕರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.