Breaking News

ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪೋಷಣ್ ಸಪ್ತಾಹ ಮಾಸಾಚರಣೆ

Advt_Headding_Middle
Advt_Headding_Middle

 

ಕೆವಿಜಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ರಾಷ್ಟ್ರೀಯ ಪೋಷಣ್ ಮಾಸಾಚರಣೆಯನ್ನು ಆಚರಿಸಲಾಯಿತು.  ಕಾರ್ಯಕ್ರಮವನ್ನು ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್ ದೀಪ ಬೆಳಗಿಸಿ ಉದ್ಘಾಟಿಸಿ, ಆರೋಗ್ಯದಲ್ಲಿ ಆಹಾರದ ಐತಿಹಾಸಿಕ ಮಹತ್ವ ಮತ್ತು ದಿನನಿತ್ಯದ ಜೀವನದಲ್ಲಿ ನಾವು ಎದುರಿಸುತ್ತಿರುವ ಕೆಲವು ಪ್ರಾಯೋಗಿಕ ಸಮಸ್ಯೆಗಳ ಕುರಿತು ವಿವರಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಸಮುದಾಯ ಆರೋಗ್ಯ ವಿಭಾಗದ ಪ್ರಾಧ್ಯಾಪಕ ಡಾ. ನಾರಾಯಣ ಹೊಳ್ಳ, ಸಮುದಾಯ ಆರೋಗ್ಯವನ್ನು ರೂಪಿಸುವಲ್ಲಿ ಪೌಷ್ಠಿಕಾಂಶ ಪಾತ್ರ ಮತ್ತು ಜಾಗತಿಕ ಮಟ್ಟದಲ್ಲಿ ಅಪೌಷ್ಟಿಕತೆಯ ಹೊರೆಯನ್ನು ಮನೆಯ ಮಟ್ಟದಲ್ಲಿ ಎದುರಿಸಲು ಕೆಲವು ಸರಳ ಪರಿಹಾರಗಳೊಂದಿಗೆ ವಿವರಿಸಿದರು. ಶಿಶುಗಳ ಪೋಷಣೆಯ ಬಗ್ಗೆ ಪೋಷಕರು ಎದುರಿಸುತ್ತಿರುವ ಪ್ರಾಯೋಗಿಕ ಸಮಸ್ಯೆಗಳನ್ನು ಎದುರಿಸಲು ಸಲಹೆಗಳ ಜೊತೆಗೆ ಶಿಶುಗಳ ಪೋಷಣೆಯ ಜಾಗತಿಕ ಪರಿಸ್ಥಿತಿ ಮತ್ತು ಗುರಿಗಳ ಬಗ್ಗೆ ಮಕ್ಕಳ ತಜ್ಞ ಡಾ. ಶ್ಯಾಮ್ ವಿವರಿಸಿದರು. ಗರ್ಭಧಾರಣೆ ಹಾಗೂ ಪ್ರಸವಪೂರ್ವ ಅವಧಿಯಲ್ಲಿ ಅಗತ್ಯವಿರುವ ಪೌಷ್ಠಿಕಾಂಶಕ್ಕೆ ಒತ್ತು ನೀಡಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಡಾ. ಸನತ್ ಕುಮಾರ್ ಡಿ.ಜೆ., ಕೆ.ವಿ.ಜಿ ಆಯುರ್ವೇದ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕರು, ಆಯುರ್ವೇದದಲ್ಲಿನ ಪೌಷ್ಠಕಾಂಶದ ತತ್ವಗಳ ಬಗ್ಗೆ ತಮ್ಮ ಜ್ಞಾನವನ್ನು ಹಂಚಿಕೊಂಡರು.
ನಂತರ ಕಾರ್ಯಕ್ರಮದ ಅಂಗವಾಗಿ ಪೋಸ್ಟರ್ ಮೇಕಿಂಗ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು ಮತ್ತು ವಿಜೇತರರಿಗೆ ಬಹುಮಾನವನ್ನು ವಿತರಿಸಲಾಯಿತು ಹಾಗೂ ಸ್ಪರ್ಧೆಯ ತೀರ್ಪುಗಾರರಾದ ಡಾ. ನಾರಾಯಣ ಹೊಳ್ಳ, ಡಾ. ಗಿರೀಶ್, ಡಾ. ದಿನೇಶ್ ಇವರಿಗೆ ಸ್ಮರಣಿಕೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಕೆವಿಜಿ ವೈದ್ಯಕೀಯ ಕಾಲೇಜಿನ ಹಿರಿಯ ಹಾಗೂ ಕಿರಿಯ ವೈದ್ಯಾಧಿಕಾರಿಗಳು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು, ನರ್ಸಿಂಗ್ ವಿದ್ಯಾರ್ಥಿಗಳು, ವೈದ್ಯಕೀಯ ವಿದ್ಯಾರ್ಥಿಗಳು, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಮುದಾಯ ಆರೋಗ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಶಶಿಕಲಾ ಎನ್ ಅವರು ಕಾರ್ಯಕ್ರಮ ಸಂಯೋಜಿಸಿದರು. ಡಾ. ವಿನಾಯಕ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.