ಬಾಳಿಲ : ಆಯುಷ್ಮಾನ್ ಕಾರ್ಡ್ ನೋಂದಣಿ ಮತ್ತು ವಿತರಣಾ ಶಿಬಿರ

Advt_Headding_Middle
Advt_Headding_Middle

ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಮತ್ತು ನಾಗರಿಕ ಸೇವಾ ಸಮಿತಿ ಬಾಳಿಲ – ಮುಪ್ಪೇರ್ಯ ಇವುಗಳ ಜಂಟಿ ಆಶ್ರಯದಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ‘ಭಾರತ್ ಆಯುಷ್ಮಾನ್ ಕಾರ್ಡ್’ ನೋಂದಾವಣೆ ಹಾಗೂ ವಿತರಣೆ ಶಿಬಿರವು ಸೆ. 20 ರಂದು ಬಾಳಿಲ ಸೊಸೈಟಿಯ ಮಿನಿ ಸಭಾಂಗಣದಲ್ಲಿ ಜರುಗಿತು.


ಶಿಬಿರದ ಉದ್ಘಾಟನೆಯನ್ನು ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೆಂಕಪ್ಪಯ್ಯ ನೆರವೇರಿಸಿ ಶುಭಹಾರೈಸಿದರು.

ವೇದಿಕೆಯಲ್ಲಿ ನಾಗರಿಕ ಸೇವಾ ಸಮಿತಿ ಬಾಳಿಲ – ಮುಪ್ಪೇರ್ಯ ಇದರ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಮೂಲೆಮಜಲು ಉಪಸ್ಥಿತರಿದ್ದರು. ನಾಗರಿಕ ಸೇವಾ ಸಮಿತಿ ಬಾಳಿಲ – ಮುಪ್ಪೇರ್ಯ ಇದರ ಸದಸ್ಯರಾದ ರವೀಂದ್ರ ರೈ ಟಪ್ಪಾಲುಕಟ್ಟೆ ಆಯುಷ್ಮಾನ್ ಕಾರ್ಡ್ ಬಗ್ಗೆ ಮಾಹಿತಿ ನೀಡಿ ಕಾರ್ಯಕ್ರಮ ನಿರೂಪಿಸಿದರು.
ಫಲಾನುಭವಿಗಳು ಆಯುಷ್ಮಾನ್ ಕಾರ್ಡ್ ನೋಂದಣಿ ಮಾಡಿಸಿಕೊಂಡರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.