ಪರ್ವತಮುಖಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Advt_Headding_Middle
Advt_Headding_Middle

ಪರ್ವತಮುಖಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಸಪ್ತಾಹವನ್ನು ಸೆ. 19 ರಂದು ನಡೆಸಲಾಯಿತು.


ಕಾರ್ಯಕ್ರಮದ ಉದ್ಘಾಟನೆಯನ್ನು ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ತಾರಾ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ರವಿಕಕ್ಕೆಪದವು ಉಪಸ್ಥಿತರಿದ್ದರು.
ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಶ್ರೀಮತಿ ಹೇಮಲತಾರವರು ಗರ್ಭಿಣಿ ಆರೈಕೆಯ ಬಗ್ಗೆ, ಅಪೌಷ್ಠಿಕತೆಯ ಬಗ್ಗೆ, ಪೌಷ್ಠಿಕ ಆಹಾರದ ಬಗ್ಗೆ ಮಾಹಿತಿಯನ್ನು ನೀಡಿದರು.
ಅಂಗನವಾಡಿ ಕಾರ್ಯಕರ್ತೆ ಸುಗುಣ ವಿ.ಯವರು ಪೌಷ್ಠಿಕ ಆಹಾರದ ಬಗ್ಗೆ, ಗ್ರೋಥ್‌ಚಾರ್ಟ್, ಪೋಷಣ್ ಅಭಿಯಾನದ ಬಗ್ಗೆ, ಮಕ್ಕಳ ಎತ್ತರ ಮತ್ತು ತೂಕದ ಬಗ್ಗೆ, ಮನೆಯ ಅಂಗಳದಲ್ಲಿ ಅಂಗನವಾಡಿ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ನೀಡಿದರು.
ರವಿಕಕ್ಕೆಪದವುರವರು ಪೌಷ್ಠಿಕ ಆಹಾರದ ಬಗ್ಗೆ, ಸ್ವಚ್ಛತೆ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಪೌಷ್ಠಿಕ ಆಹಾರ ಮತ್ತು ಪ್ರಾತ್ಯಕ್ಷಿಕೆಯನ್ನು ನಡೆಸಲಾಯಿತು. ಅಂಗನವಾಡಿ ಕಾರ್ಯಕರ್ತೆ ಸುಗುಣ ವಿ. ಸ್ವಾಗತಿಸಿ, ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.