ಸುಳ್ಯದಲ್ಲಿ ಪ್ರಶಸ್ತಿ ಪುರಸ್ಕೃತ ಹಾಗೂ ಪದೋನ್ನತಿಗೊಂಡ ಶಿಕ್ಷಕರಿಗೆ ಅಭಿನಂದನೆ

Advt_Headding_Middle
Advt_Headding_Middle
Advt_Headding_Middle

 

ಶಿಕ್ಷಕರು ವೃತ್ತಿಗಿಂತ ಹೆಚ್ಚಿನ ಜ್ಞಾನ ಪಡೆಯಬೇಕು : ಎಸ್. ಪಿ.ಮಹಾದೇವ್

ಶಿಕ್ಷಕನಾದವನು ತನ್ನ ಶಿಕ್ಷಕ ವೃತ್ತಿ ಯಲ್ಲಿರುವ ಸಿಗುವ ಜ್ಞಾನಕ್ಕಿಂತ ಇನ್ನೂ ಹೆಚ್ಚಿನ ಜ್ಞಾನ ಪಡೆದುಕೊಂಡಾಗ ಆತ ಪರಿಪೂರ್ಣ ಶಿಕ್ಷಕನಾಗಬಲ್ಲ. ಆಗ ಅವರ ಗೌರವವೂ ಹೆಚ್ಚುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹಾದೇವ್ ಹೇಳಿದರು.

ಅ.19 ರಂದು ಸುಳ್ಯ ಸಂಧ್ಯಾರಶ್ಮಿ ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸರಕಾರಿ ನೌಕರರ ಸಂಘದ ವತಿಯಿಂದ ಪದೋನ್ನತಿ ಮತ್ತು ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ನಡೆದ ಅಭಿನಂದನಾ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿ ಅವರು‌ ಮಾತನಾಡಿದರು.

ಸರಕಾರಿ ನೌಕರರ ಸಂಘದ ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ, ಕ್ಷೇತ್ರ ಸಮನ್ವಯಾಧಿಕಾರಿ ಶ್ರೀಮತಿ ವೀಣಾ ಎಂ.ಟಿ., ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಮಲ್ಲಾರ,ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಚಂದ್ರಶೇಖರ ಪೇರಾಲು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಶ್ರೀಧರ ಕೆರೆಮೂಲೆ, ಹಿರಿಯರಾದ ಬಾಪೂ ಸಾಹೇಬ್, ನಿವೃತ್ತ ಶಿಕ್ಷಕ ಹೊನ್ನಪ್ಪ ಗೌಡ ವೇದಿಕೆಯಲ್ಲಿದ್ದರು.

ಶಿಕ್ಷಣ ಸಂಯೋಜಕ ವಸಂತ್ ಏನೆಕಲ್ಲು ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಚಂದ್ರಮತಿ ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.