ಮಂಡೆಕೋಲಿನಲ್ಲಿ ವಿಶ್ವ ಶೌಚಾಲಯ ದಿನಾಚರಣೆ

Advt_Headding_Middle
Advt_Headding_Middle
Advt_Headding_Middle

 

ಜಿಲ್ಲೆಯ ಅಂಗನವಾಡಿ ಕೇಂದ್ರ ಶಾಲೆ ಮತ್ತು ವಸತಿ ಶಾಲೆಗಳಿಗೆ ಕೊಳವೆ ನೀರು ಸಂಪರ್ಕ ಕಲ್ಪಿಸುವ ಆಂದೋಲನಕ್ಕೆ ಚಾಲನೆ


ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದ.ಕ. ಜಿ.ಪಂ., ತಾ‌.ಪಂ. ಸುಳ್ಯ, ಮಂಡೆಕೋಲು ಗ್ರಾ.ಪಂ. ಸಹಭಾಗಿತ್ವದಲ್ಲಿ ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿ ವಿಶ್ವ ಶೌಚಾಲಯ ದಿನಾಚರಣೆ – 2020, ಜಲ್ ಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯ ಅಂಗನವಾಡಿ ಕೇಂದ್ರ ಶಾಲೆ ಮತ್ತು ವಸತಿ ಶಾಲೆಗಳಿಗೆ, ಕೊಳವೆ ನೀರು ಸಂಪರ್ಕ ಕಲ್ಪಿಸುವ 100 ದಿನಗಳ ವಿಶೇಷ ಆಂದೋಲನಕ್ಕೆ ಚಾಲನೆ ನೀಡುವ ಕಾರ್ಯಕ್ರಮ ನ.19 ರಂದು ಮಂಡೆಕೋಲು ಸಹಕಾರಿ ಸಂಘದ ಅಮೃತ ಸಹಕಾರ ಸಭಾಭವನದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ ವಹಿಸಿದ್ದರು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಜಿ.ಪಂ. ಆಧ್ಯಕ್ಷೆ ಮೀನಾಕ್ಷಿ ಶಾಂತಿಕೋಡು ನೆರವೇರಿಸಿದರು. ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿ.ಪಂ. ಸದಸ್ಯ ಪುಷ್ಪಾವತಿ ಬಾಳಿಲ, ತಾ.ಪಂ. ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ, ಗ್ರಾ.ಪಂ. ಮಾಜಿ ಅಧ್ಯಕ್ಷೆ ಮೋಹಿನಿ ಚಂದ್ರಶೇಖರ, ಮಂಡೆಕೋಲು ಸಹಕಾರಿ ಸಂಘದ ಅಧ್ಯಕ್ಷ ರಾಮಕೃಷ್ಣ ರೈ ಪೇರಾಲುಗುತ್ತು, ಮಂಡೆಕೋಲು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸದಾನಂದ ಮಾವಜಿ, ಸುಳ್ಯ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸುರೇಶ್, ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನಂತಕೃಷ್ಣ ಚಾಕೋಟೆ, ಗ್ರಾ.ಪಂ. ಪಿ.ಡಿ.ಒ. ರಮೇಶ್ ವೇದಿಕೆಯಲ್ಲಿದ್ದರು.

ಗ್ರಾ.ಪಂ. ಆಡಳಿತಾಧಿಕಾರಿ ಲಕ್ಷ್ಮೀಶ್ ರೈ ರೆಂಜಾಳ ಸ್ವಾಗತಿಸಿದರು. ಸುರೇಶ್ ಕಣೆಮರಡ್ಕ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.