ಪೆರುವಾಜೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪದ್ಮನಾಭ ಶೆಟ್ಟಿ ನೇಮಕ

Advt_Headding_Middle
Advt_Headding_Middle
Advt_Headding_Middle

 

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪದ್ಮನಾಭ ಶೆಟ್ಟಿ ಪಿ. ನೇಮಕಗೊಂಡಿದ್ದಾರೆ.
ರಾಜ್ಯದ ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ದೇವಸ್ಥಾನಗಳಿಗೆ ವ್ಯವಸ್ಥಾಪನಾ ಸಮಿತಿಗೆ ಒಂಭತ್ತು ಜನ ಸದಸ್ಯರುಗಳನ್ನು ಆಯ್ಕೆಗೊಳಿಸಿ, ರಾಜ್ಯ ಸರಕಾರ ಆದೇಶ ಹೊರಡಿಸಿತ್ತು.
ನ. 20 ರಂದು ದೇವಸ್ಥಾನದಲ್ಲಿ ನಡೆದ ಅಧ್ಯಕ್ಷರ ಆಯ್ಕೆ ಸಭೆಯಲ್ಲಿ ಈ ಆಯ್ಕೆ ನಡೆಯಿತು.
ದೇವಾಲಯದ ಆಡಳಿತಾಧಿಕಾರಿ ಪದ್ಮನಾಭ ನೆಟ್ಟಾರುರವರ ಉಪಸ್ಥಿತಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.
ನೂತನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರನ್ನಾಗಿ ಪದ್ಮನಾಭ ಶೆಟ್ಟಿ ಪೆರುವಾಜೆಯವರ ಹೆಸರನ್ನು ವ್ಯವಸ್ಥಾಪನಾ ಸಮಿತಿಯ ಸದಸ್ಯ ವೆಂಕಟಕೃಷ್ಣ ರಾವ್ ಸೂಚಿಸಿದರು. ವ್ಯವಸ್ಥಾಪನಾ ಸಮಿತಿ ಸದಸ್ಯ ನಾರಾಯಣ ಕೊಂಡೆಪ್ಪಾಡಿ ಅವರು ಅನುಮೋದಿಸಿದರು.
ಈ ಸಂದರ್ಭದಲ್ಲಿ
ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್,
ದಾಮೋದರ ನಾಯ್ಕ‌ ಪೆಲತ್ತಡ್ಕ,
ಜಯಪ್ರಕಾಶ್ ರೈ ಪೆರುವಾಜೆ,
ಜಗನ್ನಾಥ ರೈ ಪೆರುವಾಜೆ,
ಭಾಗ್ಯಲಕ್ಷ್ಮೀ‌ ಅರ್ನಾಡಿ,
ಯಶೋಧ ಏನಡ್ಕರವರು,ದೇವಸ್ಥಾನದ ಮೆನೇಜರ್ ವಸಂತ ಆಚಾರ್ಯ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.