ಬಳ್ಪ: ಹೆಣ್ಣು ಮಗುವನ್ನು ಉಳಿಸಿ, ಹೆಣ್ಣು ಮಗುವನ್ನು ಓದಿಸಿ ಕಾರ್ಯಕ್ರಮ

Advt_Headding_Middle
Advt_Headding_Middle
Advt_Headding_Middle

 

ದ.ಕ.ಜಿ.ಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಬಳ್ಪ ಗ್ರಾಮ ಪಂಚಾಯತ್ ಇದರ ಆಶ್ರಯದಲ್ಲಿ ಹೆಣ್ಣು ಮಗುವನ್ನು ಉಳಿಸಿ, ಹೆಣ್ಣು ಮಗುವನ್ನು ಓದಿಸಿ ಕಾರ್ಯಕ್ರಮದಡಿ ಹೆಣ್ಣು ಶಿಶುಗಳ ಪ್ರದರ್ಶನ ಕಾರ್ಯಕ್ರಮ ನ. 20ರಂದು ಬಳ್ಪ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ತ್ರೀ ಶಕ್ತಿ ಗೊಂಚಲಿನ ಅಧ್ಯಕ್ಷೆ ಶ್ರೀಮತಿ ಚಂದ್ರಕಲಾ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಎಸ್.ಎಸ್.ಪಿ.ಯು.ಕಾಲೇಜಿನ ಉಪನ್ಯಾಸಕಿಯಾದ ಶ್ರೀಮತಿ ಸೌಮ್ಯ ದಿನೇಶ್ ಎಣ್ಣೆಮಜಲುರವರು ಹದಿಹರೆಯದ ಹೆಣ್ಣುಮಕ್ಕಳಿಗೆ ಮಾಹಿತಿ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಮೇಲ್ವಿಚಾರಕಿ ಶ್ರೀಮತಿ ರವಿಶ್ರೀ ಕೆ. ಯವರು ಪ್ರಾಸ್ತವಿಕ ಮಾತನಾಡಿದರು. ಸುಬ್ರಹ್ಮಣ್ಯ ಆರಕ್ಷಕ ಠಾಣೆಯ ಪಿ.ಎಸ್.ಐ ಓಮನ ಹಾಗೂ ಹೆಡ್ ಕಾನ್ಸ್ಟೇಬಲ್ ಸಂಧ್ಯಾಮಣಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಬಾಲ್ಯವಿವಾಹದ ತಡೆ ಕಾಯ್ದೆಯ ಬಗ್ಗೆ ಮಾಹಿತಿ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚೆನ್ನಪ್ಪ ಗೌಡ ಪಂಚಾಯತ್ ನಿಂದ ಸಿಗುವ ಸೌಲಭ್ಯದ ಬಗ್ಗೆ ವಿವರಿಸಿದರು. ಭರತ್ ರಾಜ್ ರವರು ಉದ್ಯೋಗಖಾತರಿಯ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮವನ್ನು ಕಿಶೋರಿಯರು ಉದ್ಘಾಟಿಸಿದರು. ಶ್ರೀಮತಿ ಗೋಪಮ್ಮ.ಡಿ ಪ್ರಾರ್ಥಸಿದರು. ಪೇರಳಕಟ್ಟೆ ಅಂಗನವಾಡಿ ಕಾರ್ಯಕರ್ತೆ ಮಮತಾ.ಜೆ ಸ್ವಾಗತಿಸಿದರು. ಈ ಸಂಧರ್ಭದಲ್ಲಿ ಶಿಶು ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹೆಣ್ಣು ಮಕ್ಕಳಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಪ್ರೋತ್ಸಾಹಕ ಬಹುಮಾನ ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಮಕ್ಕಳ ತಾಯಂದಿರು, ಗೊಂಚಲಿನ ಪ್ರತಿನಿಧಿಗಳು, ಸ್ತ್ರೀ ಶಕ್ತಿ ಸದಸ್ಯರುಗಳು ಉಪಸ್ಥಿತರಿದ್ದರು. ಕೇನ್ಯ ಅಂಗನವಾಡಿ ಕಾರ್ಯಕರ್ತೆ ದಮಯಂತಿ, ಎಣ್ಣೆಮಜಲು ಅಂಗನವಾಡಿ ಕಾರ್ಯಕರ್ತೆ ಹರಿಣಾಕ್ಷಿ ಸಹಕರಿಸಿದರು. ಬಳ್ಪ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಮೋಹಿನಿ ಕಾರ್ಯಕ್ರಮ ನಿರೂಪಿಸಿದರು. ಸಂಪ್ಯಾಡಿ, ಬೀದಿಗುಡ್ಡೆ ಅಂಗನವಾಡಿ ಕಾರ್ಯಕರ್ತೆ ಯಮುನಾ ಕೆ ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.