ಎಲ್ಲರನ್ನು ಒಗ್ಗೂಡಿಸುವ ಶಕ್ತಿ ಕಲೆಗಿದೆ : ನ್ಯಾಯಾದೀಶ ಯಶ್ವಂತ್ ಕುಮಾರ್
ಕಲೆಗೆ ಜಾತಿ, ಧರ್ಮ, ಮತಗಳೆಂಬುದಿಲ್ಲ. ಎಲ್ಲರನ್ನೂ ಏಕತೆಯಿಂದ ಒಟ್ಟಾಗಿಸುವ ಶಕ್ತಿ ಕಲೆಗಿದೆ ಎಂದು ಸುಳ್ಯ ನ್ಯಾಯಾದೀಶ ಯಶ್ವಂತ್ ಕುಮಾರ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ ಸುಳ್ಯ, ವಕೀಲರ ಸಂಘ ಸುಳ್ಯ, ಕಂದಾಯ ಇಲಾಖೆ, ಪೋಲೀಸ್ ಇಲಾಖೆ ಇದರ ಆಶ್ರಯದಲ್ಲಿ ರಾಷ್ಟ್ರೀಯ ಏಕತಾ ಸಪ್ತಾಹ – ಪ್ರಯುಕ್ತ ಸುಳ್ಯದ ರಂಗ ಮಯೂರಿ ಕಲಾ ಶಾಲೆಯಲ್ಲಿ ನಡೆದ ಸಾಂಸ್ಕೃತಿಕ ಏಕತಾ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಕೀಲರ ಸಂಘದ ಅಧ್ಯಕ್ಷ ಎಂ.ವೆಂಕಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಪೋಲೀಸ್ ಉಪನಿರೀಕ್ಷಕ ಹರೀಶ್ ಕುಮಾರ್ ಎಂ.ಆರ್., ರಂಗಮಯೂರಿ ಕಲಾ ಶಾಲೆಯ ಅಧ್ಯಕ್ಷ ವಿಜಯ ಕುಮಾರ್ ಮಯೂರಿ ಮುಖ್ಯ ಅತಿಥಿಗಳಾಗಿದ್ದರು. ನ್ಯಾಯವಾದಿ ಜಗದೀಶ್ ಹುದೇರಿ ಸಂಪನ್ಮೂಲ ವ್ಯಕ್ತಿಯಾಗಿ ದ್ದರು.
ಸರಕಾರಿ ಸಹಾಯಕ ಅಭಿಯೋಜಕ ಜನಾರ್ದನ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು.
ಅನಘ ಭಟ್ ಪ್ರಾರ್ಥಿಸಿದರು. ನ್ಯಾಯವಾದಿ ಚಂಪಾ ವಿ ಗೌಡ ಕಾರ್ಯಕ್ರಮ ನಿರೂಪಿಸಿದರು.