ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ವಿದ್ಯಾರ್ಥಿಭವನ ಕಟ್ಟಡಕ್ಕೆ ಜಟ್ಟಿಪಳ್ಳದ ಕಾನತ್ತಿಲದಲ್ಲಿ ಶಿಲಾನ್ಯಾಸ ನೆರವೇರಿತು.
2 ಕೋಟಿ ರೂ.ಗಳ ಈ ಕಾಮಗಾರಿಗೆ ಶಾಸಕ ಎಸ್.ಅಂಗಾರ ಶಿಲಾನ್ಯಾಸ ನೆರವೇರಿಸಿದರು.
ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾ ಮೇದಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷೆ ಶ್ರೀಮತಿ ಜಾಹ್ನವಿ ಕಾಂಚೋಡು, ನ.ಪಂ. ಅಧ್ಯಕ್ಷ ವಿನಯ ಕಂದಡ್ಕ, ಉಪಾಧ್ಯಕ್ಷೆ ಶ್ರೀಮತಿ ಸರೋಜಿನಿ ಪೆಲ್ತಡ್ಕ, ಸಮಾಜ ಕಲ್ಯಾಣಾಧಿಕಾರಿ ಚಂದ್ರಶೇಖರ ಪೇರಾಲು, ನಿರ್ಮಿತಿ ಕೇಂದ್ರದ ಇಂಜಿನಿಯರ್ ಹರೀಶ್ ಮೆದು ಮತ್ತು ನ.ಪಂ. ಸದಸ್ಯರುಗಳು, ಸ್ಥಳಿಯ ನಿವಾಸಿಗಳು ಉಪಸ್ಥಿತರಿದ್ದರು.