ತೊಡಿಕಾನ ಪಾಷಾಣಮೂರ್ತಿ ಅಮ್ಮನವರ ಕ್ಷೇತ್ರದಲ್ಲಿ ದೀಪಾವಳಿ ಹಬ್ಬದ ಬಳಿಕದ ಹರಕೆ ಸಮ್ಮಾನ ನ.24 ರಂದು ನಡೆಯಿತು.
ಕೊರೋನಾ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ನಡೆದ ಹರಕೆ ಸಮ್ಮಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದರು.
ದೇವಸ್ಥಾನದ ವ್ಯವಸ್ಥಾಪನ ಸಮಿತಿ ಹಾಗೂ ಸಿಬ್ಬಂದಿ ವರ್ಗದವರು ಭಕ್ತರಿಗೆ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಉಳುವಾರು , ಸಮಿತಿಯ ಸದಸ್ಯರು, ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು , ಜೀರ್ಣೋದ್ಧಾರ ಸಮಿತಿಯವರು, ಊರವರು ಪಾಲ್ಗೊಂಡಿದ್ದರು.