ಪ್ರತಿಯೊಬ್ಬ ಭಾರತೀಯ ಪ್ರಜೆಗಳಿಗೆ ಸಂವಿಧಾನದಲ್ಲಿ ಅಡಕವಾಗಿರುವ ಮೂಲಭೂತ ಹಕ್ಕು ಹಾಗೂ ಕರ್ತವ್ಯಗಳ ಅರಿವು ಅಗತ್ಯ ಹಾಗೂ ಸಂವಿಧಾನ ರಚನೆಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಮತ್ತು ಡಾ. ರಾಜೇಂದ್ರ ಪ್ರಸಾದ್ ರವರ ಕೊಡುಗೆ ಶ್ಲಾಘನೀಯ ಎಂದು ಕೆ.ಎಸ್ ಎಸ್ ವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ತಾರಕೇಶ್ವರಿ ಯು .ಎಸ್ ಹೇಳಿದರು.
ಅವರು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರಾಜ್ಯಶಾಸ್ತ್ರ ವಿಭಾಗದ ಜಂಟಿ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಸಂವಿಧಾನ ದಿನ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಪ್ರೊ. ಉದಯಕುಮಾರ್ ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಅಧಿಕಾರಿಗಳಾದ ಪ್ರೊ. ರಮಾನಾಥ್ ಎನ್ನೆಸ್ಸೆಸ್ ಅಧಿಕಾರಿ ಶಿವಪ್ರಸಾದ್ ಎಸ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು. ಶಿವಪ್ರಸಾದ್ ಸ್ವಾಗತಿಸಿ, ರಮಾನಾಥ್ ವಂದಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕಿ ಸ್ವಾತಿ ನಿರೂಪಿಸಿದರು.