ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹಾಸನದ ಸಂಸದ ಜೆಡಿಎಸ್ ನ ಪ್ರಜ್ವಲ್ ರೇವಣ್ಣ ಅವರು ಡಿ.1 ರಂದು ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.
ಬಳಿಕ ಸುಬ್ರಹ್ಮಣ್ಯದ ವಿವಿಐಪಿ ಗೆಸ್ಟ್ ಹೌಸ್ ನಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ತಾಲೂಕಿನಾದ್ಯಂತ ಇರುವ ಸಮಸ್ಯೆಗಳ ಹಾಗೂ ಕಸ್ತೂರಿ ರಂಗನ್ ವರದಿಯ ಬಗ್ಗೆ ಮಾಹಿತಿ ಪಡೆದರು. ಜತೆಗೆ
ಪಕ್ಷ ಸಂಘಟನೆ ಬಗ್ಗೆ ಮುಖಂಡರೊಂದಿಗೆ ಮಾತುಕತೆ ನಡೆಸಿದರು ಎನ್ನಲಾಗಿದೆ. ಸಭೆಯಲ್ಲಿ ಜೆ.ಡಿ.ಎಸ್. ಕಡಬ ತಾಲೂಕು ಅಧ್ಯಕ್ಷ ಸಯ್ಯದ್ ಮೀರಾ ಸಾಹೇಬ್, ಜಿಲ್ಲಾ ಉಪಾಧ್ಯಕ್ಷ ಎಂ.ಬಿ. ಸದಾಶಿವ, ತಾಲೂಕು ಕಾರ್ಯದರ್ಶಿ ಡಾ. ತಿಲಕ್, ದಿನೇಶ್, ಸಜಿತ್ ಅಬ್ರಾಹಾಂ, ಈ.ಜೆ. ಜೋಶ್, ಸುಂದರ ಗೌಡ ಐತ್ತೂರು ಮತ್ತಿತರರು ಉಪಸ್ಥಿತರಿದ್ದರು.