ಸುಳ್ಯ ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯ ಇದರ 2019-20 ನೇ ಸಾಲಿನ ಅಂತಿಮ ವರ್ಷದ ಕಾನೂನು ಕಾನೂನು ವಿದ್ಯಾರ್ಥಿಗಳಿಗೆ ಡಿ. 4 ರಂದು ವಿದಾಯ ಕೂಟ ಕಾರ್ಯಕ್ರಮ ಆಡಿಟೋರಿಯಂನಲ್ಲಿ ನಡೆಯಿತು. ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಉದಯಕೃಷ್ಣ .ಬಿ ಇವರು ಹೊರಹೋಗುತ್ತಿರುವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.