ಕಳಂಜ ಗ್ರಾಮದ ತಂಟೆಪ್ಪಾಡಿ ಎಂಬಲ್ಲಿ ಸ್ಥಾಪನೆಗೊಂಡಿರುವ ವಸಂತ ಶೆಟ್ಟಿ ಬೆಳ್ಳಾರೆ ಮುಂದಾಳತ್ವದ ಸಾಂಸ್ಕೃತಿಕ ಕಲಾ ಕೇಂದ್ರ ನಿನಾದದ ಉದ್ಘಾಟನಾ ಕಾರ್ಯಕ್ರಮ ಡಿ. 5ರಂದು ಸಂಜೆ ನಡೆಯಿತು. ಪ್ರಸಿದ್ಧ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿ ನಿನಾದ ಕಲಾಕೇಂದ್ರವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಟ್ರಸ್ಟ್ನ ಕಾರ್ಯದರ್ಶಿ ವಸಂತ ಶೆಟ್ಟಿ ಬೆಳ್ಳಾರೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಟ್ರಸ್ಟ್ನ ಅಧ್ಯಕ್ಷ ವಿಜಯ ಬ್ಯಾಂಕ್ ನಿವೃತ್ತ ಎ.ಜಿ.ಎಂ. ಐತ್ತಪ್ಪ ಶೆಟ್ಟಿ ಸ್ವಾಗತಿಸಿದರು.
ಕು. ವಿಶ್ಮಿತಾ ಶೆಟ್ಟಿ ತಂಟೆಪ್ಪಾಡಿ ಪ್ರಾರ್ಥಿಸಿದರು. ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ ಕಾರ್ಯಕ್ರಮ ನಿರೂಪಿಸಿದರು.ಶ್ರೀಮತಿ ವಿನಯ ಶೆಟ್ಟಿ ವಂದಿಸಿದರು.