ಮುಖ್ಯಮಂತ್ರಿ, ಪಕ್ಷದ ವರಿಷ್ಠರ ಭೇಟಿಗೆ ತೆರಳಿದ ಎಸ್.ಅಂಗಾರ
ಇಂದು ಅಪರಾಹ್ನ ಪ್ರಪ್ರಥಮ ಬಾರಿಗೆ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಅಂಗಾರ ಅವರು ಇಂದು ಬೆಳಿಗ್ಗೆ ಬೆಂಗಳೂರಿನ ಬನಶಂಕರಿ ದೇವಾಲಯಕ್ಕೆ ತಮ್ಮ ಬೆಂಬಲಿಗರು ಹಾಗೂ ಕಾರ್ಯಕರ್ತರೊಂದಿಗೆ ತೆರಳಿ ವಿಶೇಷ ಪೂಜೆ ನಡೆಸಿದರು.
ಆ ಬಳಿಕ ಇದೀಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಲು ತೆರಳಿದ್ದಾರೆ ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಸಚಿವ ಸಂಪುಟದ ವಿಚಾರವಾಗಿ ಮಾತನಾಡಿದ ಬಳಿಕ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಗೆ ತೆರಳಿ ಪಕ್ಷದ ವರಿಷ್ಠರನ್ನು ಭೇಟಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂದರ್ಭದಲ್ಲಿ ಶಾಸಕ ಅಂಗಾರ ಅವರೊಂದಿಗೆ ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಮುಖರಾದ ನಾರಾಯಣ ಕೇಕಡ್ಕ, ಕೃಷ್ಣ ಶೆಟ್ಟಿ ಕಡಬ, ಸೇರಿದಂತೆ ಕಾರ್ಯಕರ್ತರು ಜೊತೆಯಲ್ಲಿದ್ದರು.
ನಾರಾಯಣ ಕೇಕಡ್ಕ, ಕೃಷ್ಣ ಶೆಟ್ಟಿ ಕಡಬ, ಅಂಗಾರರು ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ರೊಂದಿಗೆ