ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿ ಪ್ರಪ್ರಥಮ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಸತತವಾಗಿ ಆರು ಬಾರಿ ಗೆದ್ದು ಶಾಸಕರಾಗಿ ಆಯ್ಕೆಯಾಗಿರುವ ಎಸ್. ಅಂಗಾರ ಅವರು ಬೆಂಗಳೂರಿನ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸುವುದನ್ನು ಸುಳ್ಯದ ಶ್ರೀಹರಿ ವಾಣಿಜ್ಯ ಸಂಕೀರ್ಣದಲ್ಲಿರುವ ಬಿಜೆಪಿ ಕಛೇರಿಯಲ್ಲಿ ಕಾರ್ಯಕರ್ತರು ಪರದೆಯ ಮೂಲಕ ವೀಕ್ಷಿಸಿದರು.