ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ಅಂಗಾರ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ದೊರೆತ ಹಿನ್ನೆಲೆಯಲ್ಲಿ ಸುಳ್ಯ ಮಂಡಲ ಬಿಜೆಪಿ ಕಛೇರಿಯ ಮುಂಭಾಗದಲ್ಲಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಅವರ ನೇತೃತ್ವದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.