ಸುಳ್ಯ ಶಾಸಕ ಎಸ್.ಅಂಗಾರ ಕರ್ನಾಟಕ ಘನ ಸರಕಾರದ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭ ನಿಂತಿಕಲ್ಲಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ನಡೆಯಿತು.
ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ಭಾಗೀರಥಿ ಮುರುಳ್ಯ, ಎಪಿಎಂಸಿ ಮಾಜಿ ಉಪಾಧ್ಯಕ್ಷ ಸಂತೋಷ್ ಜಾಕೆ, ಶಕ್ತಿ ಕೇಂದ್ರದ ಅಧ್ಯಕ್ಷ ವಸಂತ ನಡುಬೈಲು, ಕಾರ್ಯದರ್ಶಿ ಅನೂಪ್ ಆಳ್ವ, ಲಕ್ಷ್ಮೀನಾರಾಯಣ ಆಳ್ವ, ಕಾರ್ತಿಕ್ ರೈ ಕಲ್ಲೇರಿ ಸೇರಿದಂತೆ ಸೇರಿದಂತೆ ಅನೇಕ ಕಾರ್ಯಕರ್ತರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.