ಸುಳ್ಯದಲ್ಲಿ ಕನ್ನಡ ಕಲಾ ಪ್ರತಿಭೋತ್ಸವ

Advt_Headding_Middle
Advt_Headding_Middle
Advt_Headding_Middle
Advt_Headding_Middle

ಸಮಾಜ ರತ್ನ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ

ಶ್ರೀ ಜ್ಞಾನ ಮಂದಾರ ಟ್ರಸ್ಟ್ ಬೆಂಗಳೂರು ಕಳೆದ ಹಲವು ವರ್ಷಗಳಿಂದ ವಿವಿಧ ಸಾಧಕರನ್ನು ಗೌರವಿಸುವ ಸಲುವಾಗಿ ಸಮಾಜ ರತ್ನ ರಾಜ್ಯ ಪ್ರಶಸ್ತಿಯನ್ನು ನೀಡುತ್ತಿದ್ದು, ಈ ಬಾರಿಯ ಸಮಾಜ ರತ್ನ ರಾಜ್ಯ ಪ್ರಶಸ್ತಿ ಪ್ರದಾನ ಹಾಗೂ ಕನ್ನಡ ಕಲಾ ಪ್ರತಿಭೋತ್ಸವ ಜ.17 ರಂದು ಸುಳ್ಯದ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಅಧ್ಯಕ್ಷರಾದ ಡಾ| ಕೆ.ವಿ.ಚಿದಾನಂದ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಞಾನಮಂದಾರ ಅಕಾಡೆಮಿ ಪೋಷಕರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ವಹಿಸಿದ್ದರು.
ಪೇಜಾವರ ಶ್ರೀ ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ಸಮಾಜರತ್ನ ಪ್ರಶಸ್ತಿ ಪ್ರದಾನವನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ|ಪಿ.ಎಸ್.ಯಡಿಪಡಿತ್ತಾಯ ನೆರವೇರಿಸಿದರು. ಟ್ರಸ್ಟ್‌ನ ತರಬೇತಿ ಪಡೆದ ಶಿಕ್ಷಕಿಯರಿಗೆ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಅಧ್ಯಕ್ಷರಾದ ಡಾ| ಕೆ.ವಿ.ಚಿದಾನಂದ ಅಂಕಪಟ್ಟಿ ವಿತರಿಸಿದರು. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕರ್ನಾಟಕ ಚೇತನ ಪುರಸ್ಕಾರವನ್ನು ಮಹಾರಾಷ್ಟ್ರ ಉಚ್ಚನ್ಯಾಯಾಲಯದ ಹಿರಿಯ ನ್ಯಾಯವಾದಿ ಮೋರ್ಲಾ ರತ್ನಾಕರ ಶೆಟ್ಟಿ ನೀಡಿದರು. ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾ ಮಂಡಲದ ಸಲಹೆಗಾರರಾದ ಕೆ.ಎಸ್ ಗುರುಪ್ರಸಾದ್ ಅರಳುಮಲ್ಲಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಬಳಿಕ ಜ್ಞಾನಮಂದಾರ ಅರಳು ಮಲ್ಲಿಗೆ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.


ಸಮಾಜರತ್ನ ರಾಜ್ಯ ಪ್ರಶಸ್ತಿ ಪ್ರದಾನ

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಕಾರ್ಯಕ್ರಮದಲ್ಲಿ ಸಮಾಜರತ್ನ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು,ಸುಳ್ಯದ ಹಿರಿಯ ಸಹಕಾರಿ ಪಿ.ಸಿ.ಜಯರಾಮ, ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ, ಕೆವಿಜಿ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ| ಲೀಲಾಧರ್ ಡಿ.ವಿ., ಉದ್ಯಮಿ ಗೋಪಾಲಕೃಷ್ಣ ಕೆ.ಎಸ್.ರವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಇದೇ ಸಂದರ್ಭದಲ್ಲಿ ದಿವ್ಯ ಸಾಗರ ಶಿಕ್ಷಣ ಫೌಂಢೇಶನ್ ಮತ್ತು ಜ್ಞಾನಮಂದಾರ ಶಿಕ್ಷಣ ಸಂಸ್ಥೆಯ ದಾನಿಗಳಾದ ಮುಂಬೈನ ಸಮಾಜರತ್ನ ದಿವಾಕರ ಎನ್.ಶೆಟ್ಟಿ ಕಾಯಕಯೋಗಿ ಡಾ| ಆರ್.ಎನ್ ಶೆಟ್ಟಿಯವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು.

ಜ್ಞಾನಮಂದಾರ ಟ್ರಸ್ಟ್ ನ ಐ.ಸಿ. ಕೈಲಾಸ್ ಸ್ವಾಗತಿಸಿ, ಶಿಕ್ಷಕಿ ಹೇಮಾ ಗಣೇಶ್ ಕಜೆಗದ್ದೆ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.