ಇತ್ತೀಚೆಗೆ ಸುಳ್ಯದ ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ಬೆಂಗಳೂರಿನ ಜ್ಞಾನಮಂದಾರ ಟ್ರಸ್ಟ್ ವತಿಯಿಂದ ನಡೆದ ಕನ್ನಡ ಕಲಾ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ತುಮಕೂರಿನ ಆರ್.ಎನ್.ಎಸ್.ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ವಿ.ರವಿಶಂಕರ್ರವರಿಗೆ ಸಿದ್ಧಗಂಗಾ ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಾಂಶುಪಾಲರಾಗಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಜೀವನವನ್ನೇ ಮುಡಿಪಾಗಿಟ್ಟ ಇವರು ಗ್ರಾಮೀಣ ಬಡ ವಿದ್ಯಾರ್ಥಿಗಳಿಗೆ ತನ್ನ ದುಡಿಮೆಯ ಅರ್ಧ ಭಾಗವನ್ನು ಮೀಸಲಿಟ್ಟು ಸಹಾಯ ಹಸ್ತ ನೀಡಿದ್ದಾರೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಂಗಳೂರು ವಿ.ವಿ. ಕುಲಪತಿ ಡಾ.ಪಿ.ಎಸ್.ಯಡಪಡಿತ್ತಾಯ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಜ್ಞಾನಮಂದಾರ ಟ್ರಸ್ಟ್ ಸಂಸ್ಥಾಪಕ ಸೋಮಶೇಖರ್ ಮೊದಲಾದವರು ಉಪಸ್ಥಿತರಿದ್ದರು.