*
ಜಿಲ್ಲಾಡಳಿತ ,ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ (ವಿಶೇಷ ಘಟಕ ಯೋಜನೆಯಡಿ ಸಾಂಸ್ಕೃತಿಕ ಕಾರ್ಯಕ್ರಮ) ಜನಪರ ಉತ್ಸವವು ಜ.24 ರಂದು ಸಂಜೆ ಕಲ್ಮಡ್ಕ ಕಾಚಿಲ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ಸಭಾಭವನದಲ್ಲಿ ಜರುಗಿತು.
ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಸದಸ್ಯ ಎಸ್ಎನ್ ಮನ್ಮಥ ಉದ್ಘಾಟಿಸಿದರು. ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಸಭಾಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ಸದಸ್ಯ ಅಬ್ದುಲ್ ಗಫೂರ್, ಕಾಚಿಲ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ಮೊಕ್ತೇಸರ ರಾಮಚಂದ್ರ ಎಡಪತ್ಯ, ಶ್ರೀ ಕ್ಷೇತ್ರ ಧರ್ಮಸ್ಥಳ ರಾಜ್ಯ ಭಜನಾ ಪರಿಷತ್ ಅಧ್ಯಕ್ಷ ಬಾಲಕೃಷ್ಣ ಪುತ್ಯ , ಧರ್ಮಪಾಲ ಗೌಡ ಮರಕಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ರಾಜೇಶ್ ಜಿ ಸ್ವಾಗತಿಸಿದರು. ತೀರ್ಥಾನಂದ ಕೊಡೆಂಕಿರಿ ಸಚಿತ್ ಪೆರಿಯಪು ವಂದಿಸಿದರು.
ರಾಜ್ಯದ ಪ್ರಸಿದ್ಧ ಕಲಾವಿದರಿಂದ ಹಾಗೂ ಬಳಗದಿಂದ ಕಾವ್ಯ ಗಾನ-ಕುಂಚ ಸಂಗೀತ ಸಂಭ್ರಮ, ಚಂಡೆ ವಾದನ, ಆಟಿಕಳೆಂಜ, ಕನ್ಯಾಪು, ಸೋಣ ಜೋಗಿ, ಡೊಳ್ಳು ಕುಣಿತ, ಲಂಬಾಣಿ ನೃತ್ಯ, ತಮಟೆ, ಚೆನ್ನು ನಲಿಕೆ, ಕಂಗೀಲು, ಯಕ್ಷಗಾನ, ಕೋಲಾಟ, ಕೊಡವ ನೃತ್ಯ, ಕಂಸಾಳೆ, ಪಟ ಕುಣಿತ, ವೀರಗಾಸೆ, ದುಡಿಕುಣಿತ, ಭರತನಾಟ್ಯ, ಜಾನಪದ ನೃತ್ಯ ಪ್ರದರ್ಶನ ಗುಂಡಿತು.
ಶಶಿಧರ್ ಮಾವಿನಕಟ್ಟೆ ನಿರೂಪಿಸಿದರು.