ಪ್ರತಿಷ್ಠಿತ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಫೆ. 7 ರಂದು ಬೆಂಗಳೂರಿನಲ್ಲಿ ನಡೆದ ಘಟಿಕೋತ್ಸವದಲ್ಲಿ ಕೃತಕ ದಂತ ಚಿಕಿತ್ಸಾ ವಿಭಾಗ (Prosthodontics) ದ ಸ್ನಾತಕೋತ್ತರ ಪರೀಕ್ಷೆಯಲ್ಲಿ ವಿಶ್ವವಿದ್ಯಾನಿಲಯಕ್ಕೆ ಅತೀ ಹೆಚ್ಚು ಅಂಕ ಪಡೆದ ಕೆ.ವಿ.ಜಿ. ದಂತ ಮಹಾವಿದ್ಯಾಲಯದ ವಿದ್ಯಾರ್ಥಿನಿ ಡಾ. ಗೀತಾಂಜಲಿ ಮತ್ತು ಬಿ.ಡಿ.ಎಸ್. ವಿಭಾಗದ ಪೆರಿಯೋಡೋಂಟಿಕ್ಸ್ (Periodontics) ವಿಷಯದಲ್ಲಿ ಅತೀ ಹೆಚ್ಚು ಅಂಕ ಪಡೆದ ಡಾ. ಮೇಘನಾ ಟಿ.ಹೆಚ್.ರವರಿಗೆ ಕರ್ನಾಟಕ ಸರಕಾರದ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಸುಧಾಕರ್ ರವರು ವಿಶ್ವವಿದ್ಯಾನಿಲಯದ ಚಿನ್ನದ ಪದಕ ಪ್ರದಾನ ಮಾಡಿದರು.
ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಡಾ. ರೇಣುಕಾಪ್ರಸಾದ್ ಕೆ.ವಿ, ಪ್ರಾಂಶುಪಾಲೆ ಡಾ. ಮೋಕ್ಷಾ ನಾಯಕ್ ಹಾಗೂ ಆಡಳಿತ ಮಂಡಳಿಯವರು ವಿದ್ಯಾರ್ಥಿನಿಯರನ್ನು ಅಭಿನಂದಿಸಿದ್ದಾರೆ.