ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ಜಿಲ್ಲೆಯ ಪುತ್ತೂರು ನಗರ ಪೊಲೀಸ್ ಠಾಣೆ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ, ಉಪ್ಪಿನಂಗಡಿ ಪೊಲೀಸ್ ಠಾಣೆ, ಸುಳ್ಯ ಪೊಲೀಸ್ ಠಾಣೆ, ಬೆಳ್ಳಾರೆ ಪೊಲೀಸ್ ಠಾಣೆ ಮತ್ತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಒಟ್ಟು 18 ವಾರೆಂಟ್ ಹೊಂದಿ ಕಳೆದ 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಕಳ್ಳತನ ಪ್ರಕರಣಗಳ ಆರೋಪಿ ಕೇರಳದ ಮಲಪುರಂನ ಕಾಲಿಗಾವು ಪೋಗೋಡು ೪ ಸೆನ್ಸ್ ಕಾಲೋನಿಯ ಅಶ್ರಫ್ ತಾರಿಗುಡ್ಡೆ (4೦) ಎಂಬಾತನನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿಗಳ ತಂಡವು ಕೇರಳದ ಮಲಾಪುರಂನಿಂದ ದಸ್ತಗಿರಿ ಮಾಡಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.