ಉತ್ತರಕಾಂಡ ಮೂಲದ ಸಾಧಿಕ್ ಎಂಬ ಯುವಕ ಸುಳ್ಯ ಖಾಸಗಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಸೆಲೂನ್ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು, ನಿನ್ನೆ ರಾತ್ರಿ ಸುಳ್ಯ ಅಂಬಟಡ್ಕ ಬಳಿ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಪ್ರಯತ್ನಿಸಿರುವುದಾಗಿ ತಿಳಿದುಬಂದಿದೆ. ತಕ್ಷಣ ಸ್ನೇಹಿತರು ಅವನನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ದು ಇದೀಗ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದುಬಂದಿದೆ. ಆತ್ಮಹತ್ಯೆ ಯತ್ನಕ್ಕೆ ಕಾರಣ ತಿಳಿದುಬಂದಿಲ್ಲ.