Breaking News

ದ.ಕ. ಜಿಲ್ಲೆಯ ಕುಚ್ಲು ಅಕ್ಕಿಯನ್ನೇ ಪಡಿತರದಾರರಿಗೆ ವಿತರಿಸಲು ಮುಖ್ಯಮಂತ್ರಿಗೆ ಮನವಿ

Advt_Headding_Middle
Advt_Headding_Middle
Advt_Headding_Middle
Advt_Headding_Middle

ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಲ್ಲಿ ಪಡಿತರದ ಮೂಲಕ ನೀಡುತ್ತಿರುವ ಅಕ್ಕಿಯ ಸಮಸ್ಯೆಯ ಬಗ್ಗೆ ಮನವಿಯನ್ನು
ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪನವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು. ಸದ್ಯ ನೀಡುತ್ತಿರುವ ಕುಚ್ಚಲಕ್ಕಿಯು ಅತ್ಯಂತ ಕಳಪೆ ಮಟ್ಟದ್ದಾಗಿದ್ದು; ಜನಸಾಮಾನ್ಯರು ಅದರಲ್ಲೂ ಬಡವರು ಅಕ್ಕಿಯನ್ನು ಉಪಯೋಗಿಸಲಾರದೆ ಪಡಿತರವನ್ನು ಕಡಿಮೆ ದರಕ್ಕೆ ಮಾರಾಟ ಮಾಡಿ, ಹೆಚ್ಚು ದರದ ಅಕ್ಕಿಯನ್ನು ಪಡೆಯುತ್ತಿದ್ದಾರೆ. ಕೆಲವು ಕಡೆ ಪಡಿತರವನ್ನೇ ಪಡೆಯದೆ ಉಪಯೋಗವಿಲ್ಲದ ಹಾಗೆ ಬಿಡುತ್ತಾರೆ. ಇದರಿಂದಾಗಿ ಪಡಿತರದ ಮೂಲಕ ಪಡೆದುಕೊಂಡ ಕಳಪೆ ಗುಣಮಟ್ಟದ ಅಕ್ಕಿಯನ್ನು ಮಾರಾಟ ಮಾಡಿದ ಹಿನ್ನಲೆಯಲ್ಲಿ ಕ್ರಿಮಿನಲ್ ಕೇಸುಗಳು ದಾಖಾಲಾಗುತ್ತಿವೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಬೇಕಾಗುವ ಅಕ್ಕಿಯನ್ನು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿಯೇ ಬೆಳೆಯುವ ಕುಚ್ಚಲಕ್ಕಿಯನ್ನು ತೆಗೆದುಕೊಂಡು ಅಲ್ಲಿಯೇ ಪಡಿತರ ವಿತರಿಸಬೇಕೆಂದು ಅಥವಾ ದಕ್ಷಿಣ ಕನ್ನಡ ಜಿಲ್ಲೆಗೆ ಕುಚ್ಚಲಕ್ಕಿ ಸರಬರಾಜು ಮಾಡುವ ತನಕ ಪಡಿತರದ ಮೂಲಕ ನೀಡುವ ಅಕ್ಕಿಯ ಮೌಲ್ಯವನ್ನು ನೇರವಾಗಿ ಮಹಿಳೆಯರ ಖಾತೆಗೆ ಜಮಾ ಮಾಡಿ ಅವರಿಗೆ ಬೇಕಾದ ಅಕ್ಕಿಯನ್ನು ಅವರೇ ಖರೀದಿಸುವ ಸಲುವಾಗಿ ರಾಜ್ಯದಲ್ಲಿಯೇ ಮೊದಲಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೈಲೆಟ್ ಯೋಜನೆ ಕೈಗೆತ್ತಿಕೊಳ್ಳಬೇಕಾಗಿ ಕೋರಲಾಯಿತು.

ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ, ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ  ಶ್ರೀ ನಿವಾಸ ಪೂಜಾರಿ,  ಶಾಸಕರಾದ ಉಮಾನಾಥ ಕೋಟ್ಯಾನ್, ಸಂಜೀವ ಮಠಂದೂರು, ಕಿಯೋನಿಕ್ಸ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.