ದಕ್ಷಿಣ ನೈರುತ್ಯ ರೈಲ್ವೇ ಗ್ರಾಹಕರ ಸಲಹಾ ಸಮಿತಿ ಸದಸ್ಯರಾಗಿ ವೆಂಕಟ್ ದಂಬೆಕೋಡಿ ನೇಮಕ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಭಾರತ ಸರ್ಕಾರದ ದಕ್ಷಿಣ ನೈರುತ್ಯ ರೈಲ್ವೇಯ ವಿಭಾಗೀಯ ಗ್ರಾಹಕರ ಸಲಹಾ ಸಮಿತಿ ಸದಸ್ಯರಾಗಿ ( Zonal Railway User Consultative Commitee of South Western) ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ, ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ನೇಮಕಗೊಂಡಿದ್ದಾರೆ.

Venkat Dambekodi

ಈ ಬಗ್ಗೆ ರೈಲ್ವೇ ಸಚಿವಾಲಯ ಕಾರ್ಯಾಲಯದಿಂದ ಅಧಿಸೂಚನೆ ಬಂದಿದ್ದು ಮುಂದಿನ ಎರಡು ವರ್ಷಗಳ ಕಾಲ ಇವರು ಈ ಹುದ್ದೆಯನ್ನು ನಿರ್ವಹಿಸಲಿದ್ದಾರೆ.
ದಂಬೆಕೋಡಿಯವರು ಭಾರತೀಯ ಜನತಾ ಪಕ್ಷದ ಮಂಡಲ ಸಮಿತಿಯ ಅಧ್ಯಕ್ಷರಾಗಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಲ್ಲದೆ, ಉಡುಪಿ ಮತ್ತು ದ.ಕ ಜಿಲ್ಲಾ ಟೆಲಿಕಾಂ ಸಲಹಾ ಸಮಿತಿಯ ಸದಸ್ಯರಾಗಿ ಎರಡು ಅವಧಿಯಲ್ಲಿ ಕೆಲಸ ಮಾಡಿದ್ದಾರೆ.
ದ.ಕ.ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಶಿಫಾರಸ್ಸಿನ ಮೇರೆಗೆ ಈ ನೇಮಕ ನಡೆದಿದೆ ಎಂದು ತಿಳಿದುಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.