Breaking News

ಸವಣೂರು ಕಾಲೇಜಿನಲ್ಲಿ ರಸ ಪ್ರಶ್ನೆ ಸ್ಪರ್ಧೆ ಹಾಗೂ “ಕ್ಯಾರಿಯರ್ ಗೈಡೆನ್ಸ್” ಕಾರ್ಯಕ್ರಮ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಡಾ. ಕೆ. ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ಳಾರೆ ಇದರ ವಾಣಿಜ್ಯ ಶಾಸ್ತ್ರ ವಿಭಾಗ ಮತ್ತು “ಪ್ಲೇಸ್ಮೆಂಟ್ ಸೆಲ್” ನ ವತಿಯಿಂದ ಪುತ್ತೂರು ತಾಲೂಕು, ಸವಣೂರು ಸರಕಾರಿ ಪ.ಪೂ. ಕಾಲೇಜಿನಲ್ಲಿ ಪಿ.ಯು.ಸಿ. ವಾಣಿಜ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ ಮಾ.9 ರಂದು ನಡೆಯಿತು. ನಂತರ ಪ್ರೌಢಶಾಲೆ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ನೀಡಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಡಾ. ಕೆ. ಶಿವರಾಮ ಕಾರಂತ ಕಾಲೇಜಿನ ಮುಖ್ಯಸ್ಥರು ಮತ್ತು ಸಹಾಯಕ ಪ್ರಾಧ್ಯಾಪಕರು ಶ್ರೀಮತಿ ಸುನಿತಾ ನಾಯ್ಕ್ ಇವರು ವಿದ್ಯಾರ್ಥಿಗಳಿಗೆ ಬೇರೆ ಬೇರೆ ಕ್ಷೇತ್ರಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ಸಮಗ್ರ ಮಾಹಿತಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಅಧ್ಯಾಪಕರಾದ ಶ್ರೀಮತಿ ವಿದ್ಯಾ ಹಾಗೂ ಶ್ರೀಮತಿ ಶಾಂತಾ ಮಣಿ ಭಾಗವಹಿಸಿದ್ದರು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸವಣೂರು ಸ. ಪ. ಪೂ.ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಚಂದ್ರಾವತಿಯವರು ವಹಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರೌಢಶಾಲಾ ವಿಭಾಗ ಮುಖ್ಯೋಪಾಧ್ಯಾಯರಾದ ರಘು ಹಾಗೂ ಶ್ರೀಮತಿ ಕವಿತಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಒಟ್ಟು ೧೩೦ ವಿದ್ಯಾರ್ಥಿಗಳು ಭಾಗಹಿಸಿದ್ದರು. ತೃತೀಯ ಬಿ. ಕಾಂ.ವಿದ್ಯಾರ್ಥಿಗಳಾದ ಆಶಿತಾ, ನಿಶಾ, ಶೋಭಿತ ಮತ್ತು ಕಮಲಾಕ್ಷಿ ಇವರು ಕ್ವಿಜ್ ಸ್ಪರ್ಧೆ ನಂತರ ಸಭಾ ಕಾರ್ಯಕ್ರಮ ನಡೆಸಿಕೊಟ್ಟರು. ರಸಪ್ರಶ್ನೆ ಸ್ಪರ್ಧೆ ಯಲ್ಲಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.