Breaking News

ರಾಜ್ಯಮಟ್ಟದ ಶಿಬಿರಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಅನುರಾಧಾ ಕುರುಂಜಿ ಹಾಗೂ ಶಿಬಿರಾರ್ಥಿಯಾಗಿ ನಿರಂಜನ ಕೆ. ಆಯ್ಕೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ, ವಲಯ ತರಬೇತುದಾರರಾದ ಡಾ. ಅನುರಾಧಾ ಕುರುಂಜಿಯವರು ಭಾರತೀಯ ರೆಡ್ ಕ್ರಾಸ್ ಸೊಸೈಟಿ ರಾಜ್ಯ ಶಾಖೆಯ ಯುವ ರೆಡ್ ಕ್ರಾಸ್ ಘಟಕದಿಂದ ಹಮ್ಮಿಕೊಂಡ ರಾಜ್ಯಮಟ್ಟದ ಅಭಿವಿನ್ಯಾಸ ಮತ್ತು ತರಬೇತಿ ಶಿಬಿರಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಯ್ಕೆಯಾಗಿದ್ದಾರೆ.

 

ಮಾ. 13  ರಿಂದ ಮಾ. 15 ರವರೆಗೆ ಬೆಂಗಳೂರಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಈ ಶಿಬಿರವು ನಡೆಯಲಿದ್ದು, ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕದಿಂದ ಇವರು ಆಯೋಜಿಸಿದ 250ಕ್ಕೂ ಅಧಿಕ ವಿಶಿಷ್ಟ ಕಾರ್ಯಕ್ರಮಗಳು ಮತ್ತು ವಾರ್ಷಿಕ ಶಿಬಿರಗಳನ್ನು ಪರಿಗಣಿಸಿ ರಾಜ್ಯ ಶಾಖೆಯಿಂದ ಕಾರ್ಯಕ್ರಮ ಸಂಯೋಜನೆ ಹಾಗೂ ವ್ಯಕ್ತಿತ್ವ ವಿಕಸನ ಮತ್ತು ನಾಯಕತ್ವ ವಿಷಯಕ್ಕೆ ಸಂಬಂಧಿಸಿದಂತೆ ತರಬೇತಿ ನೀಡಲು ಆಯ್ಕೆ ಮಾಡಿದ್ದಾರೆ. ಹಾಗೂ ಮಂಗಳೂರು ವಿಶ್ವವಿದ್ಯಾಲಯದಿಂದ ಆರು ಶಿಬಿರಾರ್ಥಿಗಳು ಈ ಶಿಬಿರದಲ್ಲಿ ಭಾಗವಹಿಸಲಿದ್ದು, ತಂಡದ ನೇತೃತ್ವವನ್ನು ಇವರು ವಹಿಸಲಿದ್ದಾರೆ. ಹಾಗೆಯೇ ಕಾಲೇಜಿನ ಪ್ರಥಮ ಬಿ. ಕಾಂ ವಿದ್ಯಾರ್ಥಿ ನಿರಂಜನ್ ಕೆ (ಪೇರಾಲಿನ ಕುಕ್ಕುಡೇಲು ದಿ. ಅಚ್ಚುತ ಗೌಡ ಮತ್ತು ಶ್ರೀಮತಿ ವಿಜಯ ದಂಪತಿಗಳ ಪುತ್ರ)
ಇವರು ಇದೇ ಶಿಬಿರದಲ್ಲಿ ಶಿಬಿರಾರ್ಥಿಯಾಗಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.