ಮಂಡ್ಯದ ಗುರುದೇವ ಲಲಿತಕಲಾ ಅಕಾಡೆಮಿಯ ನಿರ್ದೇಶಕಿ ಡಾ.ಚೇತನಾ ರಾಧಾಕೃಷ್ಣರವರಿಗೆ ತುಮಕೂರು ವಿಶ್ವವಿದ್ಯಾನಿಲಯದಿಂದ ಡಿ.ಲಿಟ್ ಪದವಿ ದೊರೆತಿದೆ. ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ರಾಜ್ಯಪಾಲರು ಪದವಿ ಪ್ರದಾನ ಮಾಡಿದರು.
ಡಾ.ಚೇತನಾ ರಾಧಾಕೃಷ್ಣರವರು ಕನಕಮಜಲಿನ ರಾಧಾಕೃಷ್ಣ ಮೂರ್ಜೆಯವರ ಪತ್ನಿ. ಈ ದಂಪತಿ ಮಂಡ್ಯದಲ್ಲಿ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದು, ಗುರುದೇವ ಲಲಿತ ಕಲಾ ಅಕಾಡೆಮಿಯನ್ನು ಮುನ್ನಡೆಸುತ್ತಿದ್ದಾರೆ.