ಬೆಳ್ಳಾರೆ : ಸ್ವಚ್ಛತಾ ಜಾಗೃತಿ ಆಂದೋಲನ ಮತ್ತು ಶ್ರಮದಾನ ಕಾರ್ಯಕ್ರಮ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ನೆಹರೂ ಯುವ ಕೇಂದ್ರ ಮಂಗಳೂರು, ಗ್ರಾಮ ಪಂಚಾಯತು ಬೆಳ್ಳಾರೆ, ಯುವಜನ ಸಂಯುಕ್ತ ಮಂಡಳಿ ಸುಳ್ಯ, ಸ್ನೇಹಿತರ ಕಲಾ ಸಂಘ ಬೆಳ್ಳಾರೆ, ಅಕ್ಷಯ ಯುವಕ ಮಂಡಲ ನೆಟ್ಟಾರು, ವಿರಾಟ್ ಪ್ರೆಂಡ್ಸ್ ಬೆಳ್ಳಾರೆ, ಅಕ್ಷತಾ ಮಹಿಳಾ ಮಂಡಲ ನೆಟ್ಟಾರು ಮತ್ತು ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಇದರ ಸಂಯುಕ್ತ ಆಶ್ರಯದಲ್ಲಿ ಹಾಗೂ ಬೆಳ್ಳಾರೆಯ ಎಲ್ಲಾ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150 ನೇ ಜನ್ಮ ದಿನಾಚರಣೆ ಅಂಗವಾಗಿ ಸ್ವಚ್ಛತಾ ಜಾಗೃತಿ ಆಂದೋಲನ ಮತ್ತು ಶ್ರಮದಾನ ಕಾರ್ಯಕ್ರಮವು ಮಾ. 11 ರಂದು ಬೆಳ್ಳಾರೆಯಲ್ಲಿ ನಡೆಯಿತು.
ಸ್ವಚ್ಛತಾ ಜಾಗೃತಿ ಆಂದೋಲನಕ್ಕೆ ಬೆಳ್ಳಾರೆ ಗ್ರಾಮ ಪಂಚಾಯತು ಅಧ್ಯಕ್ಷರಾದ ಚಂದ್ರಶೇಖರ ಪನ್ನೆ ಚಾಲನೆ ನೀಡಿದರು. ಬಳಿಕ ಬೆಳ್ಳಾರೆ ಪೇಟೆಯನ್ನು ಸಂಪೂರ್ಣವಾಗಿ ಸ್ವಚ್ಛತೆ ಮಾಡಲಾಯಿತು. ಬಳಿಕ ಬೆಳ್ಳಾರೆ ಬಸ್ಸು ನಿಲ್ದಾಣದ ಬಳಿಯಲ್ಲಿ ಸ್ವಚ್ಛತಾ ಜಾಗೃತಿ ಸಭೆ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ನಾರಾಯಣ ಕಿಲಂಗೋಡಿ ವಿಕೇಂದ್ರಿಕೃತ ಪಂಚಾಯತ್‌ರಾಜ್ ತರಬೇತುದಾರರು SIಖಆ ಮೈಸೂರು ಮತ್ತು ಬೆಳ್ಳಾರೆ ಪೋಲೀಸು ಠಾಣಾಧಿಕಾರಿ ಆಂಜನೇಯ ರೆಡ್ಡಿ ಇವರು ಸ್ವಚ್ಛತಾ ಜಾಗೃತಿ ಆಂದೋಲನದ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಗೌರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಭವ್ಯ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ ಅಧ್ಯಕ್ಷತೆ ವಹಿಸಿದ್ದರು. ಸ್ನೇಹಿತರ ಕಲಾ ಸಂಘದ ಅಧ್ಯಕ್ಷರಾದ ಸಂಜಯ್ ನೆಟ್ಟಾರು ಸ್ವಾಗತಿಸಿ, ಕೊರಗಪ್ಪ ನಾಯ್ಕ ಕುರುಂಬುಡೇಲು ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.