ಆಲೆಟ್ಟಿ ಶ್ರೀ ಸದಾಶಿವ ಭಜನಾ ಸಂಘದ ಆಶ್ರಯದಲ್ಲಿ ಶ್ರೀ ಸದಾಶಿವ ದೇವಸ್ಥಾನದ ಸಭಾಭವನದಲ್ಲಿ ಮಾ.14 ರಂದು ಭಜನಾ ತರಬೇತಿ ಕಾರ್ಯಕ್ರಮ ಪ್ರಾರಂಭಗೊಂಡಿತು. ದೇವಸ್ಥಾನದ ಪ್ರಧಾನ ಅರ್ಚಕ ಹರ್ಷಿತ್ ಬನ್ನಿಂತಾಯ ರವರು ದೀಪ ಬೆಳಗಿಸಿ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿದರು. ಸುಳ್ಯ ತಾಲೂಕು ಭಜನಾ ಪರಿಷತ್ ಅಧ್ಯಕ್ಷ, ಆಲೆಟ್ಟಿ ಭಜನಾ ಸಂಘದ ಕಾರ್ಯದರ್ಶಿ ಶಿವಪ್ರಸಾದ್ ಆಲೆಟ್ಟಿ ನೇತೃತ್ವದಲ್ಲಿ ಭಜನಾ ತರಬೇತಿ ತರಗತಿಯು ನಡೆಯಲಿದೆ.
ದೇವಸ್ಥಾನದ ಸೇವಾ ಸಮಿತಿ ಕಾರ್ಯದರ್ಶಿ ರಾಮಚಂದ್ರ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು.ಭಜನಾ ತರಬೇತಿಯು ಪ್ರತೀ ಆದಿತ್ಯವಾರ ಬೆಳಗ್ಗೆ ಗಂಟೆ 9.00 ರಿಂದ 10.00 ರವರೆಗೆ ನಡೆಯಲಿರುವುದು ಎಂದು ಸಂಘಟಕರು ತಿಳಿಸಿದರು.