ಬೆಳ್ಳಾರೆಯಲ್ಲಿ ಪೂರ್ವಭಾವಿ ಸಭೆ
ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಮಾ.20 ರಂದು ಜರುಗಲಿರುವ ಮಾತೃ ಸಂಗಮ ಕಾರ್ಯಕ್ರಮದ ಪೂರ್ವಭಾವಿ ಸಭೆ ಇಂದು ಬೆಳ್ಳಾರೆ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.
ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಆಶಾತಿಮ್ಮಪ್ಪ ಸುಳ್ಯ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಶುಭದಾ ಎಸ್ ರೈ, ತಾಲೂಕು ಪಂಚಾಯಿತಿ ಸದಸ್ಯೆ ಪುಷ್ಪಾವತಿ ಬಾಳಿಲ, ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ, ಜಿಲ್ಲಾ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು, ಬೆಳ್ಳಾರೆ ಗ್ರಾಮ ಪಂಚಾಯತಿ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಶೈಲೇಶ್ ನೆಟ್ಟಾರು ಹಾಗೂ ಮಹಿಳಾ ಮೋರ್ಚಾ ಪ್ರಮುಖರಾದ ಗೀತಾಪ್ರೇಮ್ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯೆಯರು ಮತ್ತು ಮಹಿಳಾ ಮೋರ್ಚಾ ಸದಸ್ಯರು ಉಪಸ್ಥಿತರಿದ್ದರು.