ಡಾ. ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ ಇದರ ವಾಣಿಜ್ಯ ಶಾಸ್ತ್ರ ವಿಭಾಗದ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜು ಐವರ್ನಾಡು ಇಲ್ಲಿ ಮಾರ್ಚ್ 10 ರಂದು ರಸಪ್ರಶ್ನೆ ಸ್ಪರ್ಧೆ ನಡೆಯಿತು.
ಕಾಲೇಜಿನ ವಾಣಿಜ್ಯ ಪದವಿ ವಿದ್ಯಾರ್ಥಿಗಳಾದ ಸನತ್, ಅನೀಶ್, ಅಶ್ಮಿತಾ, ಸುಶ್ಮಿತಾ, ಕಾವ್ಯ ಶ್ರೀ, ಈಶ್ವರಿ, ಕಮಲಾಕ್ಷಿ, ವಿಜಯಲಕ್ಷ್ಮಿ ಮತ್ತು ಶ್ರುತಿ ಭಾಗವಹಿಸಿ ಕಾರ್ಯಕ್ರಮ ನಡೆಸಿದರು.
ಉಪನ್ಯಾಸಕರಾದ ಶ್ರೀಮತಿ ಹರ್ಷಿತಾ ಮತ್ತು ರೇಷ್ಮಾ ಜಿ. ಕಾರ್ಯಕ್ರಮದಲ್ಲಿ ಹಾಜರಿದ್ದರು. ಸರಕಾರಿ ಪದವಿ ಪೂರ್ವ ಕಾಲೇಜಿನ ಪಿ. ಯು. ಸಿ ವಾಣಿಜ್ಯ ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಎರಡು ಸುತ್ತಿನ ಸ್ಪರ್ಧೆ ನಡೆಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಒಟ್ಟು 43 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.