ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಮಾ. 9 ರಿಂದ ಮಾ. 27 ರವರೆಗೆ ಜಾತ್ರೋತ್ಸವ ನಡೆಯಲಿದ್ದು, ಆ ಪ್ರಯುಕ್ತ ಗೊನೆಮುಹೂರ್ತವು ಮಾ. 9 ರಂದು ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ವಿಶ್ವನಾಥ ಕುಂಬಳಚೇರಿ, ಮತ್ತು ಮಾಜಿ ಮೊಕ್ತೇಸರರು, ದೇವತಕ್ಕ ರಾಜಗೋಪಾಲ್ ರಾಮಕಜೆ, ಆಡಳಿತ ಕಾರ್ಯದರ್ಶಿ ಹೊನ್ನಪ್ಪ ಕೊಳಂಗಾಯ, ಸಹ ಕಾರ್ಯದರ್ಶಿ ನಿಡ್ಯಮಲೆ ಜೋಯಪ್ಪ, ಭಾಸ್ಕರ ಕೋಡಿ, ವಿಶ್ವನಾಥ ಮೂಲೆಮಜಲು, ಪ್ರಭಾಕರ ಕೋಡಿ, ಗಣಪತಿ ಕುಂಬಳಚೇರಿ, ಪುರುಷೋತ್ತಮ ನಿಡ್ಯಮಲೆ, ಆಡಳಿತ ಮತ್ತು ಜೀರ್ಣೋದ್ಧಾರ ಸಮಿತಿ ಸದಸ್ಯರು, ಗ್ರಾಮಸ್ಥರು ಇದ್ದರು.