ಸಂಪಾಜೆ : ದಿ. ಬಾಲಚಂದ್ರ ಕಳಗಿಯವರ ಸ್ಮರಣಾರ್ಥವಾಗಿ ರಕ್ತದಾನ ಶಿಬಿರ ಹಾಗೂ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಜಿಲ್ಲಾ ಪಂಚಾಯತ್ ಕೊಡಗು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಡಿಕೇರಿ ಕೊಡಗು, ಕೊಡಗು ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ, ರಕ್ತನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ ಮಡಿಕೇರಿ ಕೊಡಗು, ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆ ಕೊಡಗು, ಗ್ರಾಮ ಪಂಚಾಯತ್ ಸಂಪಾಜೆ, ಪೆರಾಜೆ, ಚೆಂಬು, ಮದೆನಾಡು, ಪಯಸ್ವಿನಿ ಸಹಕಾರಿ ಸಂಘ ಸಂಪಾಜೆ ಹಾಗೂ ಲಯನ್ಸ್ ಕ್ಲಬ್ ಸಂಪಾಜೆ, ಶ್ರೀ ಭಗವಾನ್ ಸಂಘ ಚೆಂಬು, ನೆಲ್ಲಿಕುಮೇರಿ ಪ್ರೆಂಡ್ಸ್ ಕ್ಲಬ್ ಕಲ್ಲುಗುಂಡಿ ಸಾರ್ವಜನಿಕ ಸಹಭಾಗಿತ್ವದೊಂದಿಗೆ ಬಾಲಚಂದ್ರ ಕಳಗಿ ಅಭಿಮಾನಿ ಬಳಗ ಸಂಪಾಜೆ ಕೊಡಗು ಇವರ ಸಂಯುಕ್ತ ಆಶ್ರಯದಲ್ಲಿ ಬಿಜೆಪಿ ನಾಯಕ ದಿ. ಬಾಲಚಂದ್ರ ಕಳಗಿಯವರ ಸ್ಮರಣಾರ್ಥವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಹಾಗೂ ಮಕ್ಕಳ ಆರೋಗ್ಯ ತಪಾಸಣಾ ಶಿಬಿರವು ಮಾ. 19 ರಂದು ಸಂಪಾಜೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು.
ಸಂಪಾಜೆ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಎನ್.ಎಸ್. ದೇವಿಪ್ರಸಾದ್ ಗಣ್ಯರೊಂದಿಗೆ ದೀಪ ಬೆಳಗಿಸಿ ಉದ್ಘಾಟಿಸಿದರು. ಶ್ರೀಮತಿ ರಮಾದೇವಿ ಬಾಲಚಂದ್ರ ಕಳಗಿ ಅಧ್ಯಕ್ಷತೆ ವಹಿಸಿದ್ದರು.
ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ನಿರ್ಮಲ ಭರತ್, ಮಡಿಕೇರಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರಾದ ಕುಷ್ವಂತ್ ಕೋಳಿಬೈಲ್, ಸಂಪಾಜೆ ಲಯನ್ಸ್ ಕ್ಲಬ್ ಅಧ್ಯಕ್ಷ ವಾಸುದೇವ ಕಟ್ಟೆಮನೆ, ಸಂಪಾಜೆ ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ಕುಮಾರ್ ಚೆದ್ಕಾರ್, ಪಯಸ್ವಿನಿ ಸಹಕಾರಿ ಸಂಘದ ಅಧ್ಯಕ್ಷ ಅನಂತ್ ಎನ್.ಸಿ, , ಶ್ರೀ ಪಂಚಲಿಂಗೇಶ್ಚರ ದೇವಸ್ಥಾನದ ಅಧ್ಯಕ್ಷ ರಾಜಾರಾಮ್ ಕಳಗಿ, ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ನಿರ್ಮಲ ಬೇಸಿಲ್ ಅಬ್ರಹಾಂ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಸಂಪಾಜೆ ಗ್ರಾಮ ಪಂಚಾಯತ್ ನಿಕಟ ಪೂರ್ವ ಸದಸ್ಯರುಗಳು, ಕನ್ನಡ ಸಾಹಿತ್ಯ ಪರಿಷತ್ ಪಧಾದಿಕಾರಿಗಳು, ಪಯಸ್ವಿನಿ ಸಹಕಾರಿ ಸಂಘದ ನಿರ್ದೇಶಕರುಗಳು, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರುಗಳು ಮತ್ತು ಯೋಜನೆಯ ಮಹಿಳಾ ಸದಸ್ಯರುಗಳು, ಆಶಾ ಕಾರ್ಯಕರ್ತೆಯರು, ಪಯಸ್ವಿನಿ ಯುವಕ ಮಂಡಲ ಮತ್ತು ಸ್ನೇಹ ಯುವತಿ ಮಂಡಲದ ಸದಸ್ಯರುಗಳು, ಬಾಲಚಂದ್ರ ಕಳಗಿ ಅಭಿಮಾನಿಗಳು ಹಾಗೂ ಸಂಘ ಸಂಸ್ಥೆಗಳ ಸದಸ್ಯರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗ ದವರು, ಊರ ಪರವೂರ ಗ್ರಾಮಸ್ಥರು ಭಾಗವಹಿಸಿದ್ದರು.
ಶ್ರೀಮತಿ ಲೀಲಾವತಿ ಕಲಾಯಿ ಪ್ರಾರ್ಥಿಸಿದರು. ಚಿದಾನಂದ ಹಂಡನ ಗಣ್ಯರನ್ನ ಸ್ವಾಗತಿಸಿ, ಕುಮಾರ್ ಚೆದ್ಕಾರ್ ಗಣ್ಯರನ್ನು ಅಭಿನಂದಿಸಿದರು, ಪುರುಷೋತ್ತಮ ಬಾಳೆಹಿತ್ಲು ಕಾರ್ಯಕ್ರಮವನ್ನು ನಿರೂಪಿಸಿದರು. ಸ್ವಾಸ್ಥ್ಯ ಮನಸ್ಸಿನಿಂದ ಸಧೃಡ ಸಮಾಜಕ್ಕಾಗಿ ನಮ್ಮ ನಡಿಗೆ ಎಂಬ ಧ್ಯೇಯೋದ್ದೇಶದೊಂದಿಗೆ ರಕ್ತದಾನ ಶಿಬಿರದಲ್ಲಿ ಅಭಿಮಾನಿಗಳು ರಕ್ತದಾನಿಗಳಾಗಿ ಸಹಕರಿಸಿದರು. ಹಾಗೂ ಮೇಜರ್ ಡಾ. ಕುಷ್ವಂತ್ ಕೋಳಿಬೈಲು ಅವರಿಂದ ಮಕ್ಕಳ ಆರೋಗ್ಯ ತಪಾಸಣಾ ಶಿಬಿರವು ನಡೆಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.