Breaking News

ಮಾ. 28 : ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮಹಾದ್ವಾರ ಉದ್ಘಾಟನೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಪ್ರಸಿದ್ಧ ಕ್ಷೇತ್ರವಾದ ನಾಲ್ಕೂರು ಗ್ರಾಮದ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮಹಾದ್ವಾರವನ್ನು ಶ್ರೀ ದುರ್ಗಾಪರಮೇಶ್ವರಿ ಉಪಾಸನಾ ಸಮಿತಿಯವರು ಊರಿನ ಹಾಗೂ ಭಕ್ತಾಭಿಮಾನಿಗಳ ನೆರವಿನೊಂದಿಗೆ ಅಂದಾಜು 1೦ ಲಕ್ಷದ ವೆಚ್ಚದಲ್ಲಿ ನಿರ್ಮಿಸಿದ ದ್ವಾರದ ಉದ್ಘಾಟನೆ ಮಾ. 28 ರಂದು ನಡೆಯಲಿದೆ.

ಮೀನುಗಾರಿ,ಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರರವರು ಉದ್ಘಾಟಿಸಲಿದ್ದಾರೆ. ಮರಕತ ದುರ್ಗಾಪರಮೇಶ್ವರಿ ಉಪಾಸನಾ ಸಮಿತಿ ಅಧ್ಯಕ್ಷೆ ಶ್ರೀಮತಿ ನಿರ್ಮಲಾ ಪದ್ಮನಾಭ ಪರಮಲೆ ಸಭಾಧ್ಯಕ್ಷತೆ ವಹಿಸಲಿದ್ದಾರೆ.
ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರೇವತಿ ಎ.ಬಿ. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ಗುತ್ತಿಗಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪ್ರಮೀಳಾ ಭಾಸ್ಕರ, ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಮಾವಿನಕಟ್ಟೆ, ಮಾಜಿ ಸದಸ್ಯ ವೆಂಕಟರಮಣ ಕೊಚ್ಚಿ ಗೌರವ ಉಪಸ್ಥಿತರಿರುವರು ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.